MES ಸಂಘಟನೆ ನಿಷೇಧಕ್ಕೆ ಆಗ್ರಹ: ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ

ಬೆಳಗಾವಿ,ಮಾರ್ಚ್,10,2025 (www.justkannada.in): ಕಂಡಕ್ಟರ್ ಮಹದೇವಪ್ಪ ಮೇಲೆ ಹಲ್ಲೆ ಖಂಡಿಸಿ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.

ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು  ಫಿಲ್ಮಂ ಛೇಂಬರ್ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಕರವೇ ರಾಜ್ಯಾಧ್ಯಕ್ಷ  ಶಿವರಾಮೇಗೌಡ ಭಾಗಿಯಾಗಿದ್ದಾರೆ.

ಕಂಡಕ್ಟರ್ ಮಹದೇವಮಪ್ಪ ಮೇಲೆ ಹಲ್ಲೆ ಖಂಡಿಸಿರುವ ಪ್ರತಿಭಟನಾಕಾರರು ಎಂಇಎಸ್  ಸಂಘಟನೆ ನಿಷೇಧಿಸಬೇಕು. ಎಂಇಎಸ್ ಪುಂಡರನ್ನ ರಾಜ್ಯದಿಂದ ಗಡಿಪಾರು ಮಾಡಿರಿ ಎಂದು ಒತ್ತಾಯಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು,  ಮೂವರು ಎಸಿಪಿ ಸೇರಿ 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

Key words:  ban, MES, organization, Protest, Belgaum