ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬೆಂಗಳೂರು,ಮಾರ್ಚ್,10,2025 (www.justkannada.in):  ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ  ಆದೇಶಿಸಿದೆ.

ಪ್ರಕರಣ ಸಂಬಂಧ ಇಂದು ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟಿ ರನ್ಯಾ ರಾವ್ ರನ್ನು ಡಿಆರ್ ಐ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿದ್ದರು. ನ್ಯಾಯಾಲಯಕ್ಕೆ ಡಿಆರ್ ಐ ಅಧಿಕಾರಿಗಳು ತನಿಖಾ ಪ್ರಗತಿ ವರದಿ ಸಲ್ಲಿಸಿದರು.

ಇದೀಗ ರನ್ಯಾರಾವ್ ಅವರಿಗೆ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.  ರನ್ಯಾ ರಾವ್ ಜೈಲುಪಾಲಾಗಿದ್ದಾರೆ.

Key words: Gold, smuggling case, Actress, Ranya Rao, judicial custody