ಮೈಸೂರು,ಮಾರ್ಚ್,11,2025 (www.justkannada.in): ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಮೈಸೂರು ವಿಶ್ವ ವಿದ್ಯಾನಿಲಯದ ಕಾನೂನು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಮಾನಸ ಗಂಗೋತ್ರಿಯಲ್ಲಿರುವ ಎಲ್ಎಲ್ಎಂ ವಿಭಾಗದಲ್ಲಿ ಮೂಲ ಸೌಕರ್ಯಗಳ ಕೊರತೆ ಖಂಡಿಸಿ ಕಾನೂನು ವಿದ್ಯಾರ್ಥಿಗಳು ತರಗತಿಗೆ ಗೈರಾಗಿ ಪ್ರತಿಭಟನೆ ನಡೆಸಿ ಕಿಡಿಕಾರಿದರು. ಸುಮಾರು 11 ತಿಂಗಳಿನಿಂದ ಮೂಲಭೂತ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದು. ಕುಡಿಯುವ ನೀರು, ಶೌಚಾಲಯ, ಸೂಕ್ತ ಗ್ರಂಥಾಲಯ ಸೇರಿದಂತೆ ಹಲವೆಡೆ ಮೂಲಭೂತ ವ್ಯವಸ್ಥೆಗಳ ಕೊರತೆ ಇದೆ. ಹೀಗಾಗಿ ಮೂಲಭೂತ ವ್ಯವಸ್ಥೆಗಳ ಕಲ್ಪಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಬಗ್ಗೆ ಎಷ್ಟು ಬಾರಿ ಮನವಿ ಮಾಡಿದರೂ ತಲೆಗೆ ಹಾಕಿಕೊಳ್ಳದ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಬೇಕಾದ ಅಗತ್ಯ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿದರು.
Key words: Protest, outrage, Mysore University, law students