ನಟಿ ರನ್ಯಾರಾವ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು,ಮಾರ್ಚ್,11,2025 (www.justkannada.in): ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ನಾಳೆಗೆ ಮುಂದೂಡಿ‌ಕೆ ಮಾಡಿದೆ.

ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಪ್ರತಿಯಾಗಿ ಆಕ್ಷೇಪಣೆ ಸಲ್ಲಿಸುವಂತೆ ಡಿಆರ್‌ಐ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತ್ತು.  ಇಂದು ರನ್ಯಾ ರಾವ್‌ ಜಾಮೀನು ಅರ್ಜಿಗೆ ಡಿಆರ್‌ ಐ ತನಿಖಾಧಿಕಾರಿ ನಾಗೇಶ್ವರ ರಾವ್ ಆಕ್ಷೇಪಣೆ ಸಲ್ಲಿಸಿದ್ದಾರೆ.  ಬಳಿಕ ಕೋರ್ಟ್ ವಿಚಾರಣೆಯನ್ನ ನಾಳೆಗೆ ಮುಂದೂಡಿಕೆ ಮಾಡಿದೆ.

ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ನಟಿ ರನ್ಯಾ ರಾವ್ ಅವರನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದರು. ಮಾರ್ಚ್ 3ರಂದು ಎಮಿರೇಟ್ಸ್ ಏರ್‌ಲೈನ್ಸ್ ಮೂಲಕ ದುಬೈನಿಂದ ಬೆಂಗಳೂರಿಗೆ ಬಂದಿಳಿದ ರನ್ಯಾ ರಾವ್ ಅವರನ್ನು 14.8 ಕೆ.ಜಿ ಚಿನ್ನದ ಸಮೇತ ಡಿಆರ್‌ಐ ಅಧಿಕಾರಿಗಳು ಬಂಧನ ಮಾಡಿದ್ದರು. ಬಳಿಕ ಮೂರು ದಿನ ಡಿಆರ್​ಐ ಅಧಿಕಾರಿಗಳ ಕಸ್ಟಡಿಗೆ ರನ್ಯಾ ರಾವ್ ಅವರನ್ನು ನೀಡಿ ಮಾರ್ಚ್ 7ರಂದು ಕೋರ್ಟ್ ಆದೇಶಿಸಿತ್ತು.  ನಿನ್ನೆ ಕೋರ್ಟ್ ರನ್ಯಾರಾವ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ.

Key words: Actress, Ranayarao, bail application, hearing