ನವದೆಹಲಿ,ಮಾರ್ಚ್,12,2025 (www.justkannada.in): ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಸಿ.ಎನ್ ಮಂಜುನಾಥ್ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಕಾರಿಡಾರ್ ಅಲ್ಲಿ “ಚನ್ನಪಟ್ಟಣ ಬೊಂಬೆಗಳನ್ನು” ಉತ್ತೇಜಿಸುವ ನಿಟ್ಟಿನಲ್ಲಿ Toys Park ನಿರ್ಮಿಸಿ ಸ್ಥಳೀಯವಾಗಿ ಬೊಂಬೆ ತಯಾರಿಕರಿಗೆ ಮತ್ತು ಪ್ರವಾಸಿಗರಿಗೆ ಅನುವು ಮಾಡಿಕೊಡುವಂತೆ ಮನವಿ ಮಾಡಿದರು.
ದೆಹಲಿಯಲ್ಲಿಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಸಂಸದ ಡಾ.ಸಿ.ಎನ್ ಮಂಜುನಾಥ್ ಅವರು, ಚನ್ನಪಟ್ಟಣವನ್ನು ಬೊಂಬೆಗಳಿಗೆ ಐತಿಹಾಸಿಕ ಹಿನ್ನಲೆಯಿದ್ದು, ಬೊಂಬೆಗಳ ನಾಡು ಎಂದೇ ಪ್ರಸಿದ್ಧವಾಗಿದೆ. ಸಾವಿರಾರು ಕುಟುಂಬಗಳು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಬೊಂಬೆ ಉದ್ಯಮದ ಮೇಲೆ ಅವಲಂಬಿತವಾಗಿವೆ. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಕಾರಿಡಾರ್ ನಿರ್ಮಾಣದ ನಂತರ ಚನ್ನಪಟ್ಟಣ ನಗರಕ್ಕೆ ಆಗಮಿಸುವ ಪ್ರಯಾಣಿಸುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ಈ ಉದ್ಯಮದ ಮೇಲೆ ಅವಲಂಬಿತರಾಗಿರುವವರ ಸ್ಥಿತಿ ಶೋಚನೀಯವಾಗಿದೆ.
ಈ ಹಿನ್ನಲೆ ಎಕ್ಸ್ ಪ್ರೆಸ್ ಕಾರಿಡಾರ್ ನಲ್ಲಿ ಚನ್ನಪಟ್ಟಣ ಸಮೀಪ Toys Park ನಿರ್ಮಿಸುವುದರಿಂದ ಸ್ಥಳೀಯವಾಗಿ ಬೊಂಬೆ ತಯಾರಿಕೆಯ ಮೇಲೆ ಅವಲಂಬಿತರಾಗಿರುವವರಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ ಮತ್ತು ಬೊಂಬೆಗಳ ನಾಡು ಎಂಬ ಚನ್ನಪಟ್ಟಣದ ಹಿರಿಮೆಯನ್ನು ಹೆಚ್ಚಿಸದಂತಾಗುತ್ತದೆ ಎಂದು ಸಂಸದ ಮಂಜುನಾಥ್ ಅವರು ಮನವಿ ಸಲ್ಲಿಸಿದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಆದಷ್ಟು ಬೇಗ ಮಾಡಿಕೊಡುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಸಂಸದ ಸಿಎನ್ ಮಂಜುನಾಥ್ ತಿಳಿಸಿದ್ದಾರೆ.
ENGLISH SUMMARY..
After a Meeting with the Union Minister for Road Transport and National Highways,Mr Nitin Gadkari in Parliament House,regarding Establishment of Toys Park at Channapattana (New Bengaluru- Mysore express Highway)The Member of Parliament (Bengaluru Rural) Dr C N Manjunath briefing the content of the Meeting,in New Delhi on March-12.
Key words: Union Transport Minister, MP, Dr. C.N. Manjunath, requests, Toys Park