ಬೆಂಗಳೂರು,ಮಾರ್ಚ್,13,2025 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಇಂದು ರಾತ್ರಿ ಔತಣಕೂಟ ಆಯೋಜಿಸಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಔತಣಕೂಟ ನಡೆಯಲಿದೆ. ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ ಎನ್ನಲಾಗಿದೆ.
ಇದು ನನ್ನ ಬದುಕಿನ ಮಹತ್ವದ ಕ್ಷಣ! ಕೆಪಿಸಿಸಿ ಅಧ್ಯಕ್ಷನಾಗಿ 5 ವರ್ಷಗಳು ತುಂಬಿದೆ. ಈ ಸುಧೀರ್ಘ ಪ್ರಯಾಣದಲ್ಲಿ ಜೊತೆಯಾದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿಗೆ ನಾನೆಂದಿಗೂ ಚಿರಋಣಿ. ಈ 5 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ಒಗ್ಗಟ್ಟಾಗಿ ಇಟ್ಟ ಹೆಜ್ಜೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಇನ್ನು ಮಾರ್ಚ್ 15 ರಂದು ಕೆಪಿಸಿಸಿ ಪದಾಧಿಕಾರಿಗಳಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: DCM, DK Shivakumar, dinner party, congress MLAs, today