ಬೆಂಗಳೂರು,ಮಾರ್ಚ್,13,2025 (www.justkannada.in): ಇಂದು ಸಂಜೆ 7 ಗಂಟೆಗೆ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನ ನಾಳೆಗೆ ಮುಂದೂಡಿಕೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಸಂಜೆ 7 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯನ್ನ ಆಯೋಜಿಸಲಾಗಿತ್ತು. ಆದರೆ ನಾಳೆ ಸಂಜೆ 6 ಗಂಟೆಗೆ ಸಭೆಯನ್ನ ಮುಂದೂಡಲಾಗಿದ್ದು, ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ.
ರಾಜ್ಯದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಗಳಿಂದ ಶಾಸಕರ ಹಕ್ಕುಗಳಿಗೆ ಚ್ಯುತಿ ಬಾರದಂತೆ ರಕ್ಷಣೆ ಒದಗಿಸಲಾಗುವುದು. ಅಧಿವೇಶನ ಮುಗಿದ ಬಳಿಕ ವಿಪಕ್ಷ ಶಾಸಕರ ಜೊತೆ ಚರ್ಚಿಸಿ ಒಮ್ಮತದ ನಿರ್ಣಯಕ್ಕೆ ಬರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Key words: Cabinet meeting, today, postponed, tomorrow