ಬೆಂಗಳೂರು,ಮಾರ್ಚ್,14,2025 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಕಾಂಗ್ರೆಸ್ ಶಾಸಕರು ಸಚಿವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದರು. ಈ ಔತಣಕೂಟಕ್ಕೆ ಇಬ್ಬರು ಸಚಿವರು ಗೈರಾದರೇ ಇಬ್ಬರು ಬಿಜೆಪಿ ಶಾಸಕರು ಭಾಗಿಯಾಗಿದ್ದರು ಎನ್ನಲಾಗಿದೆ.
ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಕೆಪಿಸಿಸಿ ಅಧ್ಯಕ್ಷರಾಗಿ ವಹಿಸಿಕೊಂಡು 5 ವರ್ಷ ತುಂಬಲಿದ್ದು, ಈ ಹಿನ್ನಲೆಯಲ್ಲಿ ನಿನ್ನೆ ಕಾಂಗ್ರೆಸ್ ನ ಶಾಸಕರಿಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಔತಣಕೂಟ ಏರ್ಪಡಿಸಿದ್ದರು. ಆದರೆ ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್ ರಾಜಣ್ಣ ಗೈರಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು, ಶಾಸಕರು, ಸಚಿವರು ಭಾಗವಹಿಸಿ ಶುಭಾಶಯ ಕೋರಿದರು. ಡಿಕೆ ಶಿವಕುಮಾರ್ ಅವರ ಔತಣಕೂಟದಲ್ಲಿ ಬಿಜೆಪಿ ಶಾಸಕರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಕಾಣಿಸಿಕೊಂಡಿದ್ದರು.
Key words: Two ministers, absent, DCM, DK Shivakumar, dinner party