ಬೆಂಗಳೂರು,ಮಾರ್ಚ್,15,2025 (www.justkannada.in): ಚಿನ್ನಕಳ್ಳ ಸಾಗಾಣೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾರಾವ್ ಇದೀಗ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣ ಸಂಬಂಧ ಜಾಮೀನು ನೀಡುವಂತೆ ಕೋರಿ ನಟ ರನ್ಯಾರಾವ್ ಸಲ್ಲಿಸಿದ್ದ ಅರ್ಜಿಯನ್ನ ನಿನ್ನೆ ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಇದೀಗ ನಟಿ ರನ್ಯಾರಾವ್ ಪರ ವಕೀಲರು ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಈ ಅರ್ಜಿ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಪ್ರಕರಣ ಕುರಿತು ಡಿಆರ್ ಐ ತನಿಖೆ ನಡೆಸುತ್ತಿದ್ದು ನಟಿ ರನ್ಯಾರಾವ್ 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದಾರೆ.
Key words: Gold Smuggling Case, Sessions Court, bail, actress, Ranayarao