ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಆರೋಪ:  ಮಾಜಿ ಸಚಿವ ಹೆಚ್ಎಂ ರೇವಣ್ಣ ವಿರುದ್ದ ದೂರು

ಬೆಂಗಳೂರು,ಮಾರ್ಚ್,18,2025 (www.justkannada.in): ಕಾಂಗ್ರೆಸ್ ಕಾರ್ಯಕರ್ತೆಯ ಮೊಬೈಲ್ ಕಿತ್ತುಕೊಂಡು ಹಲ್ಲೆ ನಡೆಸಿರುವ ಆರೋಪ ಮಾಜಿ ಸಚಿವ ಹಾಗೂ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣ ವಿರುದ್ದ ಕೇಳಿ ಬಂದಿದೆ.

ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ದೂರು ನೀಡಿದ್ದಾರೆ.  ಕುಮಾರಕೃಪ ಗೆಸ್ಟ್ ಹೌಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಮೊಬೈಲ್ ಕಿತ್ತುಕೊಂಡು ಅವರ ಮೇಲೆ ಮಾಜಿ ಸಚಿವ ಹೆಚ್.ಎಂ ರೇವಣ್ಣ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾತನಾಡಿರುವ ಮಾಜಿ ಸಚಿವ ಹೆಚ್ ಎಂ ರೇವಣ್ಣ, ಮಹಿಳೆ ಮೇಲೆ ಯಾವುದೇ ಹಲ್ಲೆ ಮಾಡಿಲ್ಲ. ಆ ಮಹಿಳೆ ರಾಹುಲ್ ಗಾಂಧಿ ಹೆಸರಲ್ಲಿ ಅಧಿಕಾರಿಗೆ ಕಿರಿಕಿರಿ ಮಾಡುತ್ತಿದ್ದರು. ಈ ಮಧ್ಯೆ ವಿಡಿಯೋ ಮಾಡಬೇಡ ಎಂದು ಮೊಬೈಲ್ ತಳ್ಳಿದ್ದು ಅಷ್ಟೆ ಎಂದು ಸ್ಪಷ್ಟಪಡಿಸಿದರು.

Key words: Complaint, former minister, HM Revanna, assaulting, Congress worker