ಬೆಂಗಳೂರು,ಮಾರ್ಚ್, 18,2025 (www.justkannada.in): ತಮ್ಮ ವಿರುದ್ದ ಭೂ ಒತ್ತುವರಿ ಆರೋಪ ಸಂಬಂಧ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರಕ್ಕೆ ನಾನೇ ಟಾರ್ಗೆಟ್ ಆಗಿದ್ದೇನೆ ಎಂದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದು. ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಭೂಮಿ ಒತ್ತುವರಿ ಸೇರಿದಂತೆ ನಾನು ಯಾವ ಅಕ್ರಮವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ. ನಾನು ಒಬ್ಬ ರೈತನಾಗಿ ಬದುಕಲು 40 ವರ್ಷಗಳ ಹಿಂದೆ ಖರೀದಿಸಿರುವ ಜಮೀನು ಅದು. ಒಬ್ಬ ಸಾಮಾನ್ಯ ಪ್ರಜೆಗೆ ಯಾವುದೇ ತೆರವು ಮಾಡಬೇಕು ಎಂದರೂ ಕಾನೂನು ಪ್ರಕಾರ ಹದಿನೈದು ದಿನಗಳ ಮೊದಲೇ ನೋಟಿಸ್ ನೀಡಬೇಕು. ಅದರೆ ನನಗೆ ಈವರೆಗೆ ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡಿಲ್ಲ. ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ ಮಾಡುತ್ತೇನೆ ಎಂದರು.
ಕಾಂಗ್ರೆಸ್ ಸರ್ಕಾರಕ್ಕೆ ನಾನೇ ಟಾರ್ಗೆಟ್ ಅಗಿದ್ದೇನೆ. ನನ್ನ ಬಿಟ್ಟರೆ ಯಾರು ಇಲ್ಲ. ಸದ್ಯ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತಿದ್ದೆನೆ. 40 ವರ್ಷದ ಹಿಂದೆ ಖರೀದಿ ಮಾಡಿದ ಈ ಭೂಮಿಗೆ ನೂರು ಬಾರಿ ತನಿಖೆಯಾಗಿದೆ. 40 ವರ್ಷದಿಂದಲೂ ತನಿಖೆ ನಡೆಯುತ್ತಲೇ ಇದೆ. ನನ್ನ ಪರಿಸ್ಥಿತಿಯೇ ಹೀಗಾದರೆ ಜನ ಸಾಮಾನ್ಯರ ಪರಿಸ್ಥಿತಿ ಹೇಗಿರಬಹುದು? ಎಂದು ಹೆಚ್ ಡಿಕೆ ಬೇಸರ ವ್ಯಕ್ತಪಡಿಸಿದರು.
Key words: target, Congress, government, Union Minister, HDK