ಬೆಂಗಳೂರು,ಮಾರ್ಚ್,17,2025 (www.justkannada.in): ಎಂಇಎಸ್ ಮತ್ತು ಶಿವಸೇನೆಯನ್ನ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್ 22 ರಂದು ಕರ್ನಾಟಕ ಬಂದ್ ನಿಶ್ಚಿತ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.
ಕರ್ನಾಟಕ ಬಂದ್ ಸಂಬಂಧ ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.
ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಮಾರ್ಚ್ 22ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ತನಕ ಕರ್ನಾಟಕ ಬಂದ್ ಮಾಡಲಾಗುತ್ತದೆ. ಬೆಳಗ್ಗೆ 10:30ಕ್ಕೆ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ. ಹೀಗಾಗಿ ನಿಮ್ಮ ಸ್ವಾಭಿಮಾನಕ್ಕಾಗಿ ಯಾರು ವಾಹನ ಹತ್ತಬೇಡಿ ಸಾರ್ವಜನಿಕರಿಗೆ ಮನವಿ ಮಾಡಿದರು.
ಮಾರ್ಚ್ 22ರಂದು ಯಾರು ಮೆಟ್ರೋ ಹತ್ತಬೇಡಿ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜೊತೆ ಮಾತಾನಾಡಿದ್ದೇವೆ. ಅಂದು ಬಸ್ ಓಡಿಸಬಾರದೆಂದು ಹೇಳಿದ್ದೇವೆ. ಇನ್ನೂ ಒಂದು ಸಲ ಹೇಳುತ್ತೇವೆ ಅವತ್ತು ಬಸ್ ಓಡಿಸಬಾರದು. ಬೆಳಗಾವಿಯಿಂದ ಎಂಇಎಸ್ ಅನ್ನು ಒದ್ದು ಓಡಿಸಬೇಕೋ ಬೇಡ್ವೋ? ಬೆಳಗಾವಿ ಘಟನೆ ಕಣ್ಣಿಗೆ ಚಿಕ್ಕದಾಗಿರಬಹುದು. ಆದ್ರೆ ನಮ್ ಕಣ್ಣಿಗೆ ಇದು ಬೆಟ್ಟ ಎಂದರು.
ಇನ್ನು ಮಾರ್ಚ್ 22ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ಸಾರಿಗೆ ನೌಕರರ ಕೂಟ ಸಹ ಬೆಂಬಲಿಸಿದೆ. ಈ ಬಗ್ಗೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು ಪ್ರತಿಕ್ರಿಯಿಸಿ, ಬಂದ್ಗೆ KSRTC, ಬಿಎಂಟಿಸಿ ನೌಕರರ ಸಂಘದಿಂದ ಬೆಂಬಲ ಇದೆ. ಕಳೆದ ತಿಂಗಳು ಸಾರಿಗೆ ನೌಕರನ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಖಂಡಿಸಿದ ಕನ್ನಡಪರ ಹೋರಾಟಗಾರರಿಗೆ ಸದಾ ಚಿರಋಣಿ. ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರು ನಿಮ್ಮ ಜೊತೆ ಇದ್ದೇವೆ. ಕರ್ನಾಟಕ ಬಂದ್ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ಪಷ್ಟಪಡಿಸಿದರು.
Key words: Karnataka bandh, fixed, March 22