‘ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ’ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು ,ಮಾರ್ಚ್,19,2025 (www.justkannada.in): ರಾಜ್ಯದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು ವಿಧಾನಸಭೆಯಲ್ಲಿ ಇಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.

ವಿಧಾನಸಭೆಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು  ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ ಮಂಡಿಸಿದ್ದರು. ಮಂಡ್ಯದಲ್ಲಿ ಪ್ರತ್ಯೇಕ ಕೃಷಿ ವಿಶ್ವವಿದ್ಯಾಲಯವಾಗಿ ಅವಕಾಶ ಮಾಡಿಕೊಡುವ ವಿಧೇಯಕ ಇದಾಗಿದೆ.

ಇದೀಗ ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರವಾಗಿದ್ದು, ಮಂಡ್ಯ ವಿಸಿ ಫಾರ್ಮ್ ನಲ್ಲಿ ಪ್ರತ್ಯೇಕ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ನಿರ್ಧರಿಸಲಾಗಿದೆ. ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಕೊಡಗು ಜಿಲ್ಲೆಯ ಬೆಳೆಗಳ ಉತ್ಪಾದನಾ ಕ್ಷೇತ್ರದಲ್ಲಿ ಅಧ್ಯಯನ ಸಂಶೋಧನೆಗೆ ಅವಕಾಶವಿದೆ.

ಇನ್ನು ಕೃಷಿ ವಿವಿಯಲ್ಲಿ ತೋಟಗಾರಿಕೆ ವಿಭಾಗ ವಿಂಗಡಣೆಗೆ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ ವಿರೋಧ ವ್ಯಕ್ತಪಡಿಸಿದರು.  ಈಗಾಗಲೇ ಮಂಡ್ಯ ವಿವಿಯಲ್ಲಿ ತೋಟಗಾರಿಕೆ ವಿಭಾಗ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ತೋಟಗಾರಿಕೆ ವಿವಿ ಇದೆ. ಇದರಿಂದ ಬಾಗಲಕೋಟೆ ತೋಟಗಾರಿಕೆ ವಿವಿಗೆ ಹೊಡೆತ ಬೀಳಲಿದೆ ಎಂದು ಯತ್ನಾಳ್ ತಿಳಿಸಿದರು.

Key words: ‘University of Agricultural Sciences’ Amendment, Assembly