ಬೆಂಗಳೂರು, ಮಾ.19, 2025: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಈ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ.
ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ, ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
key words: Fish theft, Malpe, CM,assaulted woman.udupi, police
summary:
Fish theft in Malpe: CM orders action against those who assaulted woman.
Chief Minister Siddaramaiah has instructed the police to conduct a proper investigation and take necessary action regarding the incident in which a woman was tied to a tree and brutally hanged on suspicion of stealing fish in Malpe, Udupi district.