ನವದೆಹಲಿ,ಮಾರ್ಚ್,26,2025 (www.justkannada.in): ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಭಾರೀ ಸಂಚಲನ ಮೂಡಿಸಿರುವ ನಡುವೆಯೇ ಇದೀಗ ಮತ್ತೊಂದು ರಾಜಕೀಯ ಬೆಳವಣಿಗೆ ನಡೆದಿದೆ. ಹೌದು, ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಜೊತೆ ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೌದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ನಿನ್ನೆ ನವದೆಹಲಿಯಲ್ಲಿ ಡಿನ್ನರ್ ನಲ್ಲಿ ಭಾಗಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನವದೆಹಲಿಯ ನಿವಾಸದಲ್ಲಿ ಈ ಡಿನ್ನರ್ ಮೀಟಿಂಗ್ ಆಯೋಜಿಸಲಾಗಿದ್ದು,ದೆಹಲಿಗೆ ತೆರಳಿರುವ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮನೆಗೆ ಆಹ್ವಾನಿಸಿದ್ದರು ಎಂದು ಹೇಳಲಾಗಿದೆ.
ಡಿನ್ನರ್ ಗೆ ಬರುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರೇ ಸತೀಶ್ ಜಾರಕಿಹೊಳಿ ಅವರನ್ನು ಡಿನ್ನರ್ ಗೆ ಕರೆದಿದ್ದರು ಎನ್ನಲಾಗಿದ್ದು, ಈ ವೇಳೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Key words: Union Minister, HDK, Minister, Sathish Jarkiholi, dinner meeting