ಸಿಐಡಿಗೆ ತನಿಖೆಗೆ ಹನಿಟ್ರ್ಯಾಪ್ ಕೇಸ್

ಬೆಂಗಳೂರು,ಮಾರ್ಚ್,27,2025 (www.justkannada.in): ರಾಜ್ಯದ‍ಲ್ಲಿ ಭಾರಿ ಸದ್ದು ಮಾಡಿದ  ಹನಿಟ್ರ್ಯಾಪ್ ಪ್ರಕರಣವನ್ನು ಸಿಐಡಿ ತನಿಖೆಗೆ  ಹಸ್ತಾಂತರಿಸಲಾಗಿದೆ.

ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಭೇಟಿಯಾಗಿ ಮೂರು ಪುಟಗಳ ದೂರನ್ನು ಸಲ್ಲಿಸಿದ್ದರು. ನಂತರ ಗೃಹ ಸಚಿವರು ಈ ಕುರಿತು ತನಿಖೆ ನಡೆಸುವಂತೆ ದೂರಿನ ಅರ್ಜಿಯನ್ನು ಡಿಜಿಪಿಗೆ ರವಾನಿಸಿದ್ದರು. ಇದೀಗ ೀ ದೂರಿನ ಆಧಾರದ ಮೇಲೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಹನಿಟ್ರ್ಯಾಪ್ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಸಚಿವ ರಾಜಣ್ಣ ಅವರ ಪುತ್ರ ಹಾಗೂ ಎಂಎಲ್ ಸಿ ರಾಜೇಂದ್ರ ರಾಜಣ್ಣ ಅವರು  ಈ ವಿಚಾರ ತಿಳಿಸಿದ್ದು, ಸಿಐಡಿ ಅಧಿಕಾರಿಗಳು ಈಗಾಗಲೇ ತಮ್ಮ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ಮನೆಯ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಹೇಳಿದ್ದಾರೆ.

ತಮ್ಮ ವಿರುದ್ದ ಹನಿಟ್ರ್ಯಾಪ್ ವಿಚಾರವನ್ನ ಸಚಿವ ಕೆ.ಎನ್ ರಾಜಣ್ಣ ವಿಧಾನಸಭೆ ಕಲಾಪದಲ್ಲಿ ಇತ್ತೀಚೆಗೆ  ಪ್ರಸ್ತಾಪಿಸಿದ್ದರು. ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದ್ದು ಅಲ್ಲದೆ  48 ಕ್ಕೂ ಹೆಚ್ಚು ರಾಜಕಾರಣಿಗಳ ಮೇಲೆ ಹನಿಟ್ರ್ಯಾಪ್  ಆಗಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದರು. ನಂತರ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಭಾರಿ ಗದ್ದಲ ಉಂಟಾಗಿತ್ತು. ಪ್ರಕರಣ ಕುರಿತು ಸಿಬಿಐ ತನಿಖೆಗೆ ವಹಿಸುವಂತೆ ವಿಪಕ್ಷನಾಯಕರು ಆಗ್ರಹಿಸಿದ್ದರು.

Key words: Honeytrap case, investigated, CID