ರಾಹುಲ್ ಗಾಂಧಿ ಭೇಟಿಯಾಗಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ

ನವದೆಹಲಿ,ಏಪ್ರಿಲ್,3,2025 (www.justkannada.in):  ಸದ್ಯ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿದ್ದಾರೆ.

ನವದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಪಕ್ಷ, ಸರ್ಕಾರ ಮಟ್ಟದಲ್ಲಿ ಆಗಿರುವ ಬೆಳವಣಿಗೆಯ ಬಗ್ಗೆ ಚರ್ಚೆ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ.ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಸೇರಿ ರಾಜ್ಯದ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

Key words: CM Siddaramaiah, met, Rahul Gandhi, discussed