ಬೆಂಗಳೂರು,ಏಪ್ರಿಲ್,4,2025 (www.justkannada.in): ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ವಿಚಾರ ಚರ್ಚೆಯಾಗುತ್ತಲೇ ಇದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಎನ್.ಎಸ್ ಬೋಸರಾಜು, ಕೆಪಿಸಿಸಿ ಬದಲಾವಣೆ ಬದಲಾವಣೆ ಎಂಬುದು ಊಹಾಪೋಹವಷ್ಟೆ. ನನಗೆ ಇರುವ ಮಾಹಿತಿ ಪ್ರಕಾರ ಯಾವುದೇ ಬದಲಾವಣೆ ಇಲ್ಲ. ನಾನು ಕಳೆದ 51 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.
ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಬೋಸರಾಜು, ಸಚಿವ ಸಂಪುಟ ವಿಸ್ತರಣೆ ಪುನರಚನೆ ಯಾವುದೂ ಇಲ್ಲ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಜತೆ ರಾಜ್ಯದ ಅನೇಕ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎಂದರು.
Key words: Change, KPCC president, speculation, Minister, NS Bosaraju