ಬೆಲೆ ಏರಿಕೆ ನೀತಿಗೆ ಖಂಡನೆ: ಏ.7 ರಂದು ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

ಮೈಸೂರು,ಏಪ್ರಿಲ್,4,2025 (www.justkannada.in): ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಸಿಎಂ ತವರು ಜಿಲ್ಲೆ ಮೈಸೂರಿನಲ್ಲೂ ಪ್ರತಿಭಟನೆಗೆ ಬಿಜೆಪಿ ಸಿದ್ಧತೆ ನಡೆಸಿದೆ.

ಏಪ್ರಿಲ್ 7 ರಂದು ಮೈಸೂರಿನಲ್ಲಿ ಬಿಜೆಪಿ  ಬೃಹತ್ ಪ್ರತಿಭಟನೆ ನಡೆಸಲಿದ್ದು ಪ್ರತಿಭಟನೆ ವಿಚಾರವಾಗಿ  ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಶಾಸಕ ಶ್ರೀವತ್ಸ, ಎಂಎಲ್ ಸಿ ರವಿಕುಮಾರ್, ಮಾಜಿ ಶಾಸಕ ಪ್ರೀತಮ್ ಗೌಡ, ಎಲ್ ನಾಗೇಂದ್ರ, ರಘು ಕೌಟಿಲ್ಯಾ, ಮೈಸೂರು, ಚಾಮರಾಜನಗರ ಜಿಲ್ಲೆಯ ಕಾರ್ಯಕರ್ತರು ಭಾಗಿಯಾಗಿದ್ದರು.

ಬಿಜೆಪಿ ಪ್ರತಿಭಟನೆ ಕುರಿತು ಮೈಸೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ವಕ್ತಾರ ಎಂ.ಜಿ ಮಹೇಶ್,  ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಮೈಸೂರಿನಿಂದಲೇ ಹೋರಾಟ ಆರಂಭಿಸುತ್ತಿದ್ದೇವೆ. ಮೈಸೂರಿನಿಂದ ಈಗಾಗಲೇ ಹಲವು ಹೋರಾಟಗಳನ್ನು ಮೈಸೂರಿನಿಂದಲೇ ಆರಂಭಿಸಿ ಯಶಸ್ವಿಯಾಗಿದ್ದೇವೆ. ಹಾಗಾಗಿ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಿಂದಲೇ ಹೋರಾಟ ಆರಂಭಿಸುತ್ತಿದ್ದೇವೆ. ಏ.7 ರಂದು ಮೈಸೂರಿನ ಟೌನ್ ಹಾಲ್ ಬಳಿಯಿಂದ ಜನಾಂದೋಲನ ಯಾತ್ರೆಗೆ ಚಾಲನೆ ಸಿಗಲಿದೆ. ಸುಮಾರು 2 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಹೊರಡಲಿದೆ. ರಾಜ್ಯ ಸರ್ಕಾರದ ವಿರುದ್ಧ ಜನ ಜಾಗೃತಿ ಮೂಡಿಸುವ ಕೆಲಸದಲ್ಲಿ ನಮ್ಮ ಬಿಜೆಪಿ ಪಕ್ಷದ ಹಿರಿಯ ಮುಖಂಡರು ಈ ಕಾರ್ಯಕರ್ತದಲ್ಲಿ ಭಾಗವಹಿಸಲಿದ್ದಾರೆ. ಮೊದಲ ಹಂತದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಉಡುಪಿ ಸೇರಿದಂತೆ ದಕ್ಷಿಣ ಕರ್ನಾಟಕದ ಭಾಗದಲ್ಲಿ ಜನಾಂದೋಲನ ಯಾತ್ರೆ ಹೊರಡುತ್ತದೆ ಎಂದು ಮಾಹಿತಿ ನೀಡಿದರು.

ಶಾಸಕ ಪೊನ್ನಣ್ಣ, ಮಂಥರ್ ಗೌಡ ರಾಜೀನಾಮೆಗೆ ಆಗ್ರಹ.

ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೊನ್ನಣ್ಣ, ಮಂಥರ್ ಗೌಡ ರಾಜೀನಾಮೆಗೆ ಆಗ್ರಹಿಸಿದ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ ಮಹೇಶ್, ಪೊಲೀಸರನ್ನ ಬಳಸಿಕೊಂಡು ತಮ್ಮ ರಾಜಕೀಯ ಎದುರಾಳಿಗಳನ್ನ ಮುಗಿಸಲು ಮುಂದಾಗಿದ್ದಾರೆ. ವಿನಯ್ ಸಾವಿಗೆ ಸಿದ್ದರಾಮಯ್ಯ, ಪೊನ್ನಣ್ಣ, ಮಂಥರ್ ಗೌಡ ನೇರ ಕಾರಣ. ವಿನಯ್ ಡೆತ್ ನೋಟ್ ನೋಡಿದ್ರೆ ರಕ್ತ ಕುದಿಯುತ್ತದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಗೂಂಡಾ ಸರ್ಕಾರ ರೀತಿ ವರ್ತನೆ ಮಾಡುತ್ತಿದೆ.  ವಿನಯ್ ಆತ್ಮಹತ್ಯೆ ಪ್ರಕರಣವನ್ನ ಸಿಬಿಐ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

Key words: Condemning, price hike, BJP, protests, Mysore, April 7