ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ವಿನಯ್ ಆತ್ಮಹತ್ಯೆ ಕುರಿತು ಸೂಕ್ತ ತನಿಖೆಗೆ ಆರ್.ಅಶೋಕ್ ಆಗ್ರಹ

ಬೆಂಗಳೂರು, ಏಪ್ರಿಲ್, 4,2025 (www.justkannada.in): ಬಿಜೆಪಿ ಕಾರ್ಯರ್ತ  ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು, ಅದಕ್ಕಾಗಿ ಸೂಕ್ತ ತನಿಖೆ ಆಗಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.

ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಆರ್.ಅಶೋಕ್ , ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ. ವಿನಯ್ ಒಳ್ಳೆಯ ವಿದ್ಯಾವಂತ, ಪತ್ನಿ ಸಾಫ್ಟ್‌ವೇರ್ ಇಂಜಿನಿಯರ್. 2-3 ತಿಂಗಳಿಂದ ಎಸ್ಪಿ ಮೂಲಕ ಕಾಂಗ್ರೆಸ್ ಶಾಸಕರು, ಶಾಸಕರ ಆಪ್ತ ತೆನ್ನೀರ ಮಹಿನಾ ಕಿರುಕುಳ ನೀಡಿದ್ದಾರೆ. ಶಾಸಕ ಧಮ್ಕಿ ಹಾಕಿದ್ದನ್ನು ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ. ವಿನಯ್ ಮಡಿಕೇರಿ ಬಿಟ್ಟು ಬೆಂಗಳೂರಿನ ಮನೆಗೆ ಬಂದರೂ ಪೊಲೀಸರು ಕಿರುಕುಳ ಕೊಟ್ಟಿದ್ದಾರೆ. ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸರನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಬಳಸಿಕೊಳುತ್ತಿದ್ದಾರೆ. ಸಿಎಂ ಪದಕ ಲಭಿಸಿದ ಪೊಲೀಸ್ ಮೇಲೆ ಲೋಕಾಯುಕ್ತ ದಾಳಿ ಆಗಿದೆ. ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು, ಅದಕ್ಕಾಗಿ ಸೂಕ್ತ ತನಿಖೆ ಆಗಬೇಕು. ಕೊಡಗು ಎಸ್ಪಿ ಅಮಾನತು ಆಗಬೇಕು. ನಾಳೆ ನಮ್ಮ ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇವೆ. ತೆನ್ನೀರಾ, ಪೊನ್ನಣ್ಣ, ಮಂತರ್ ಗೌಡ ವಿರುದ್ಧ ದೂರು ನೀಡಿದ್ದೇವೆ ಎಂದು ಹೇಳಿದರು.

ENGLISH SUMMARY…

Police stations have become Congress offices: Opposition Leader R. Ashok*
Bengaluru, April 3

While visiting B.R. Ambedkar Hospital in Bengaluru, Opposition Leader R. Ashok spoke to the media regarding the suicide case of BJP worker Vinay Somayya. He expressed that this incident has caused pain to their workers. “Vinay was a well-educated person, and his wife is a software engineer. For the past 2-3 months, Congress MLAs and their close associate Tennira Mahina have been harassing him through the SP. The MLA’s threats have been mentioned in the death note. Even after Vinay left Madikeri and came to his home in Bengaluru, the police continued to harass him. Police stations have become Congress offices,” he said, expressing his outrage.

He further stated, “The police are being used to settle political vendettas. A police officer who received the CM’s medal has faced a Lokayukta raid. Action must be taken against those responsible for Vinay’s suicide, and a proper investigation is needed for that. The Kodagu SP should be suspended. We will decide on our course of action tomorrow. We have filed complaints against Tennira, Ponnanna, and Mantar Gowda.”

Key words: Police stations, Congress, offices, R. Ashok