ಬೆಂಗಳೂರು, ಏಪ್ರಿಲ್ ,4,2025 (www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಲಾಠಿಚಾರ್ಜ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಧಾರವಾಡ ಹೈಕೋರ್ಟ್ ಪೀಠ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.
ಬೆಳಗಾವಿ ಅಧಿವೇಶನ ನಡೆಯುತ್ತಿದ್ದ ವೇಳೆ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಪ್ರತಿಭಟನೆ ನಡೆಸಿ ಮುತ್ತಿಗೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು.
ಲಾಠಿ ಪ್ರಹಾರ ಪ್ರಕರಣ ಕುರಿತು ತನಿಖೆಗೆ ಆದೇಶಿಸಲು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿದ್ದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆಗೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
ಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಜಯಮೃತ್ಯುಂಜಯ ಸ್ವಾಮೀಜಿ, ಹೈಕೋರ್ಟ್ ಅದೇಶದಿಂದ ನಮಗೆ ಮೊದಲ ಹಂತದ ಜಯ ಸಿಕ್ಕಂತಾಗಿದೆ. ನ್ಯಾಯಾಂಗ ತನಿಖೆಯಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Key words: Panchamasaali fighters, Lathi Charge, Court, judicial inquiry