ಬೆಂಗಳೂರು,ಏಪ್ರಿಲ್,9,2025 (www.justkannada.in): ಗಣಿ ಗುತ್ತಿಗೆ ನವೀಕರಣಕ್ಕೆ 500 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿಗೌಡ ಎಂಬುವರು ಪತ್ರ ಬರೆದಿದ್ದಾರೆ.
ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500ಕೋಟಿ ರೂ ಕಿಕ್ ಬ್ಯಾಕ್ ಪಡೆದಿದ್ದಾರೆಂದು ಸಿಎಂ ಸಿದ್ದರಾಮಯ್ಯ ವಿರುದ್ದ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿಗೌಡ ಆರೋಪಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
2015ರಲ್ಲಿ 8 ಗಣಿ ಗುತ್ತಿಗೆ ನವೀಕರಣ ಮಾಡಲಾಗಿತ್ತು. ಹರಾಜು ಹಾಕುವ ಬದಲು ನವೀಕರಣ ಮಾಡಿಕೊಟ್ಟಿದ್ದಕ್ಕೆ ಸಿಎಂ ಸಿದ್ದರಾಮಯ್ಯ 500 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ. ಇದರಿಂದ 5000 ಕೋಟಿ ರೂ ನಷ್ಟ ಆಗಿದೆ. ಹೀಗಾಗಿ ಭ್ರಷ್ಟಚಾರ ನಿಗ್ರಹ ಕಾಯ್ದೆಯಡಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಮಮೂರ್ತಿಗೌಡ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ದೂರುದಾರರ ಜತೆ ಸುದೀರ್ಗ ಚರ್ಚೆ ನಡೆಸಿದ ರಾಜ್ಯಪಾಲರು ದೂರಿನ ಮೇಲೆ ಸಹಿ ಮಾಡಿ ಕಾನೂನು ವಿಭಾಗಕ್ಕೆ ಕಳಿಸಿದ್ದಾರೆ. ಚರ್ಚೆ ಮಾಡಿ ತೀರ್ಮಾನಿಸುವುದಾಗಿ ರಾಜ್ಯಪಾಲರು ಹೇಳಿದ್ದಾರೆ.
Key words: 500 crore, kickback, allegations, CM Siddaramaiah, prosecution, Governor