ಯಾದಗಿರಿ,ಏಪ್ರಿಲ್,9,2025 (www.justkannada.in): ಕೇಂದ್ರ ಸರ್ಕಾರವೇ ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಕೆ ಮಾಡಿದೆ. ಆದರೆ ಬಿಜೆಪಿಯವರು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಪ್ರತಿಭಟನೆ ಮಾಡಲು ಯಾವುದೇ ನೈತಿಕತೆ ಇಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ಕಿಡಿಕಾರಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ರಾಜ್ಯದ ಬಿಜೆಪಿ ಸಂಸದರು ಪಿಎಂ ಪ್ರಧಾನಿ ಮೋದಿ ಮುಂದೆ ನಿಂತು ಮಾತಾಡಲು ನಡುಗುತ್ತಾರೆ. ಇಂತಹವರು ರಾಜ್ಯದ ಅಭಿವೃದ್ಧಿ ಬಗ್ಗೆ ಏನು ಮಾತಾಡುತ್ತಾರೆ. ರಾಜ್ಯದಲ್ಲಿರುವ ಬಿಜೆಪಿಯವರು ಈಗ ಖಾಲಿ ಇದ್ದಾರೆ. ಹೀಗಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಕೇಂದ್ರ ಸರ್ಕಾರವೇ ಪೆಟ್ರೋಲ್ , ಗ್ಯಾಸ್ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಹೀಗಾಗಿ ಮೊದಲು ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮಾಡಲಿ, ಅದು ಬಿಟ್ಟು ಇಲ್ಲಿ ರಾಜ್ಯ ಸರ್ಕಾರದ ವಿರುದ್ದ ಹೋರಾಟ ಮಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.
ಸಿಎಂ, ಡಿಸಿಎಂ ಅವರ ಅಧಿಕಾರ ಕುರಿತು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
Key words: Price hike, Centre, BJP, protest, state government , Minister, Ramalingareddy