ಏ.24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ಫಿಕ್ಸ್

ಚಾಮರಾಜನಗರ,ಏಪ್ರಿಲ್,10,2025 (www.justkannada.in): ಸಿಎಂ ಸಿದ್ದರಾಮಯ್ಯಗೆ  ಅನಾರೋಗ್ಯ ಸೇರಿದಂತೆ ಇತರೆ ಕಾರಣವೊಡ್ಡಿ ಮುಂದೂಡಿಕೆಯಾಗಿದ್ದ ಮಲೆ ಮಹದೇಶ್ವರ ಬೆಟ್ಟದಲ್ಲಿನ ಕ್ಯಾಬಿನೆಟ್ ಮೀಟಿಂಗ್ ಗೆ ಇದೀಗ ದಿನಾಂಕ ನಿಗದಿಯಾಗಿದೆ.

ಏಪ್ರೀಲ್ 24 ರಂದು  ಮಲೆ ಮಹದೇಶ್ವರ ಬೆಟ್ಟದಲ್ಲಿ  ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಸಿಎಂ ಅನಾರೋಗ್ಯ ಸೇರಿದಂತೆ ಇತರೆ ಕಾರಣವೊಡ್ಡಿ ಮೂರ್ನಾಲ್ಕು ಬಾರಿ ನಿಗದಿಯಾಗಿದ್ದ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಏಪ್ರಿಲ್ 24ಕ್ಕೆ ಸಚಿವ ಸಂಪುಟ ಸಭೆ ನಡೆಸಲು ಡೇಟ್ ಫಿಕ್ಸ್ ಮಾಡಲಾಗಿದೆ.

ಹಳೆಯ ಮೈಸೂರು ಪ್ರದೇಶಕ್ಕೆ ಹೆಚ್ಚಿನ ಗಮನ ಸೆಳೆಯುವ ನಿರೀಕ್ಷೆಯಿದ್ದ ಈ ಸಚಿವ ಸಂಪುಟ ಸಭೆಯನ್ನು ಆರಂಭದಲ್ಲಿ ಫೆಬ್ರವರಿ 15 ರಂದು ನಡೆಸಲು ತೀರ್ಮಾನಿಸಲಾಗಿತ್ತು. ನಂತರ ಫೆಬ್ರವರಿ 17 ಕ್ಕೆ ಮುಂದೂಡಲಾಯಿತು. ನಂತರ ವಿವಿಧ ಕಾರಣಗಳಿಗಾಗಿ ಮತ್ತೆ ಮುಂದೂಡಲಾಗಿತ್ತು. ಇದೀಗ ಏಪ್ರಿಲ್ 24 ರಂದು ನಡೆಸಲು ತೀರ್ಮಾನಿಸಲಾಗಿದೆ.

Key words: Cabinet meeting, fixed, April 24, Male Mahadeshwar Hill