ಶಾಸಕ ರಾಯರೆಡ್ಡಿ ಹೇಳಿಕೆ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿ- ಆರ್.ಅಶೋಕ್ ಟೀಕೆ

ಬೆಂಗಳೂರು,ಏಪ್ರಿಲ್,10,2025 (www.justkannada.in):  ಭ್ರಷ್ಟಾಚಾರದಲ್ಲಿ ಕರ್ನಾಟಕ  ನಂ.1 ಎಂದು ಸಿಎಂ ಅವರ ಆರ್ಥಿಕ ಸಲಹೆಗಾರ ಹಾಗೂ ಕಾಂಗ್ರೆಸ್ ಶಾಸಕ  ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಸಿಎಂ ಸಿದ್ದರಾಮಯ್ಯ ಸರ್ಕಾರದ ಆಡಳಿತಯಂತ್ರ ಕುಸಿದುಬಿದ್ದಿದೆ. ಹಾಗಾಗಿಯೇ ರಾಜ್ಯಾದ್ಯಂತ ಜನಾಕ್ರೋಶ ವ್ಯಕ್ತವಾಗುತ್ತಿದೆ. 20 ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಣ್ಣ ಬಯಲಾಗಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದರಿಂದ ರಾಜ್ಯದ ಖಜಾನೆ ಬರಿದಾಗಿ, ಸರ್ಕಾರ ದಿವಾಳಿಯಾಗಿದೆ. ಒಂದೇ ಒಂದು ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸಿಎಂ  ಸಿದ್ದರಾಮಯ್ಯ ಮತ್ತು ಸಚಿವರು ಎಲ್ಲಿಯೂ ಪ್ರವಾಸ ನಡೆಸುತ್ತಿಲ್ಲ. ಭೇಟಿ ನೀಡಿದ ಕಡೆ ಜನರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಕಾಲಹರಣ ಮಾಡುತ್ತಿದ್ದಾರೆ. ಒಂದು ಕಡೆ ದರ ಏರಿಕೆ ಬರೆ, ಮತ್ತೊಂದು ಕಡೆ ಯಾವ ಕಚೇರಿಗೆ ಹೋದರೂ ಲಂಚದ ಹಾವಳಿಯಿಂದ ಜನ ಆಕ್ರೋಶಗೊಂಡಿದ್ದಾರೆ ಎಂದು ಆರ್.ಅಶೋಕ್ ಕಿಡಿಕಾರಿದರು.

Key words: MLA, Raiyareddy,  statement, R. Ashok