ಬೆಳಗಾವಿ,ಏಪ್ರಿಲ್,15,2025 (www.justkannada.in): ಸ್ವಾತಂತ್ರ ನಂತರ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಈ ಹಿಂದೆ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದರು. ಅದರಲ್ಲಿ ವಿಫಲರಾದರು. ಈಗ ಜಾತಿ ಗಣತಿ ಅಂತಾ ಹಿಂದೂ ಮುಸ್ಲೀಮರನ್ನ ಒಡೆಯುವ ಕೆಲಸಕ್ಕೆ ಮುಂದಾಗಿದ್ದಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ಅಡ್ರೆಸ್ ಕಳೆದುಕೊಂಡಿದೆ ಎಂದು ಲೇವಡಿ ಮಾಡಿದರು.
ಕರ್ನಾಟಕ ಅಂದ್ರೆ ಅತಿ ಹೆಚ್ಚು ದುಬಾರಿ ರಾಜ್ಯವಾಗಿದೆ. ರಾಜ್ಯದಲ್ಲಿ 50ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ನಾಳೆ ಬೆಳಗಾವಿಯಲ್ಲಿ ಜನಾಕ್ರೋಶ ಯಾತ್ರೆ ಮಾಡುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.
ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಕಾರಣ ದೇಶದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಸಂಸತ್ತಿನಲ್ಲಿ ವಿರೋಧ ಪಕ್ಷದಲ್ಲಿ ಕೂರಲು ಪರದಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಅಂಬೇಡ್ಕರ್ ಹಾಗೂ ಮುಸ್ಲಿಮರು ನೆನಪಾಗುತ್ತಿದ್ದಾರೆ ಎಂದು ಬಿವೈ ವಿಜಯೇಂದ್ರ ಹರಿಹಾಯ್ದರು.
Key words: Congress, following divide and rule, policy, B.Y. Vijayendra