ರಾಜ್ಯದಲ್ಲಿ ಲಿಂಗಾಯತರು, ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡಲು ಆಗುತ್ತಾ?  ಶಾಮನೂರು ಶಿವಶಂಕರಪ್ಪ

ದಾವಣಗೆರೆ,ಏಪ್ರಿಲ್,16,2025 (www.justkannada.in):  ಜಾತಿಗಣತಿ ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ಪರ ಮತ್ತು ವಿರೋಧಗಳು ವ್ಯಕ್ತವಾಗಿವೆ. ಈ ಕುರಿತು ಮಾತನಾಡಿರುವ ಶಾಸಕ  ಮನೂರು ಶಿವಶಂಕರಪ್ಪ, ರಾಜ್ಯದಲ್ಲಿ ವೀರಶೈವ ಲಿಂಗಾಯತರನ್ನು ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ ಸರಕಾರಕ್ಕೆ ಸವಾಲು ಹಾಕಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ರಾಜ್ಯದಲ್ಲಿ ಫಸ್ಟ್ ಲಿಂಗಾಯತರು ಇದ್ದಾರೆ. ಸೆಕೆಂಡ್ ಒಕ್ಕಲಿಗರು ಇದ್ದಾರೆ. ಅವರು ನಮ್ಮನ್ನು ಎದುರಾಕಿಕೊಂಡು ರಾಜ್ಯಾಭಾರ ಮಾಡೋಕೆ ಆಗುತ್ತಾ? ಒಕ್ಕಲಿಗರು ಇಬ್ಬರು ಸೇರಿ ಹೋರಾಟ ಮಾಡುತ್ತೇವೆ. ವೀರಶೈವ ಲಿಂಗಾಯತ ಮಹಾಸಭಾ ಈಗಾಗಲೇ ಸಭೆ ನಡೆಸಿದ್ದೇವೆ ಎಂದರು.

ಅವರು ಸುಮ್ಮನೆ  ಜಾತಿಗಣತಿ ವರದಿ ಬಿಡುಗಡೆ ಮಾಡ್ತಿವಿ ಅಂತ ಹೇಳ್ತಾ ಇದ್ದಾರೆ. ರಾಜ್ಯದಲ್ಲಿ ವೀರಶೈವ ಲಿಂಗಾಯತರನ್ನು ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗೋದಿಲ್ಲ ಎಂದು  ಹೇಳಿಕೆ ನೀಡಿದರು.

Key words: Lingayats, Vokkaligas, Caste census, Shamanur Shivashankarappa