ಜನಿವಾರ ಪ್ರಕರಣ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು,ಏಪ್ರಿಲ್,19,2025 (www.justkannada.in): ಬೀದರ್ ಮತ್ತು ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ್ದ ಘಟನೆ ಭಾರಿ ವಿವಾದಕ್ಕೆ ಕಾರಣವಾಗಿದ್ದು ಈ ಘಟನೆಯನ್ನ ಕಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆದಿದೆ.

ಮೈಸೂರು ಜಿಲ್ಲಾ ಬ್ರಾಹ್ಮಣ ವೇದಿಕೆ ವತಿಯಿಂದ ಬಿಜೆಪಿ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಜನಿವಾರ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಯಿತು. ನಗರದ ಅಗ್ರಹಾರ ವೃತ್ತದಿಂದ ಕೃಷ್ಣರಾಜ ಪೊಲೀಸ್ ಠಾಣೆವರೆಗೆ ರ್ಯಾಲಿ ನಡೆದಿದ್ದು ಪ್ರತಿಭಟನಾಕಾರರು ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ನೂರಾರು ಬ್ರಾಹ್ಮಣ ಸಮುದಾಯದ ಜನರು ಭಾಗಿಯಾಗಿದ್ದು ಕೃಷ್ಣರಾಜ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಿದರು.  ಕೂಡಲೇ ಕೃತ್ಯ ಎಸಗಿದವರನ್ನ ಬಂಧಿಸಬೇಕು. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಜನಿವಾರ ಹಾಕೋದು ನಮ್ಮ ಸಂಪ್ರದಾಯ. ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ನಿಟ್ಟಿನಲ್ಲಿ ನಡೆದುಕೊಂಡವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Key words: Protest, Mysore, condemning, Janiwara case