ವಾಯುಭಾರ ಕುಸಿತ : ರಾಜ್ಯದಲ್ಲಿ ಐದು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು,ಏಪ್ರಿಲ್,21,2025 (www.justkannada.in): ರಾಜ್ಯದಲ್ಲಿ ಬೇಸಿಗೆಯ ಕಾವು ಹೆಚ್ಚಾಗಿದ್ದು ಬಿಸಿಲ ಬೇಗೆಯಿಂದ ಜನರು ಬಳಲುತ್ತಿದ್ದಾರೆ. ಈ ಮಧ್ಯೆ ಬೆಂಗಳೂರು ಸೇರಿ ವಿವಿಧೆಡೆ ಈಗಾಗಲೇ ಮಳೆಯಾಗಿದ್ದುಇದೀಗ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ . ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗಲಿದ್ದು ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ರಾಯಚೂರು, ಕೊಪ್ಪಳ , ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಜಿಲ್ಲೆಯಲ್ಲಿ ಒಣ ಹವೆ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಕಲ್ಲು ಜಿಲ್ಲೆಯ ಕೆಲವು ಕಡೆ ಗುಡಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Key words: Heavy rain, state, five days