ಜ‍ಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ: ಪ್ರವಾಸಕ್ಕೆ ತೆರಳಿದ್ದ ಕನ್ನಡಿಗ ಬಲಿ

ಜಮ್ಮು ಕಾಶ್ಮೀರ,ಏಪ್ರಿಲ್,22,2025 (www.justkannada.in):  ಜಮ್ಮುಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರೊಬ್ಬರು ಉಗ್ರರ ಗುಂಡಿಗೆ ಬಲಿಯಾದ ಘಟನೆ ನಡೆದಿದೆ.

ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ಮಾಡಿದ್ದು ಈ ವೇಳೆ ಶಿವಮೊಗ್ಗದ ವಿಜಯನಗರ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್   ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಜುನಾಥ್ ಅವರು ತಮ್ಮ ಪತ್ನಿ ಪಲ್ಲವಿ ಹಾಗೂ ಪುತ್ರನ ಜೊತೆ ಜಮ್ಮುಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಈ ಮಧ್ಯೆ ಬೇಲ್ ಪುರಿ ತಿನ್ನುತ್ತಿದ್ದ ಪ್ರವಾಸಿಗರನ್ನ ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ಈ ವೇಳೆ ಮಂಜುನಾಥ್ ಸಾವನ್ನಪ್ಪಿದರೇ ಕರ್ನಾಟಕ, ಗುಜರಾತ್,  ಮಹಾರಾಷ್ಟ್ರ ಪ್ರವಾಸಿಗರಿಗೆ ಗಾಯಗಳಾಗಿದೆ. ಸದ್ಯ ಮಂಜುನಾಥ್ ಪತ್ನಿ ಪಲ್ಲವಿ ಹಾಗೂ ಪುತ್ರ ಸೇಫ್ ಆಗಿದ್ದಾರೆ.

Key words: Terrorist , attack, Jammu and Kashmir, Death, Kannadiga