ಬೆಂಗಳೂರು, ಏಪ್ರಿಲ್, 23,2025 (www.justkannada.in): ನೀಟ್ ಆಕಾಂಕ್ಷಿಗಳ ಸಂಖ್ಯೆ ಮತ್ತು ಲಭ್ಯವಿರುವ ವೈದ್ಯಕೀಯ ಸೀಟುಗಳ ನಡುವಿನ ಅಂತರ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ನಮ್ಮ ಸರ್ಕಾರವು ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಸೀಟುಗಳನ್ನು ಗಣನೀಯವಾಗಿ ಹೆಚ್ಚಿಸುವಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು (ಎನ್ಎಂಸಿ) ಆಗ್ರಹಿಸಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಎಸ್ಎಬಿವಿಎಂಸಿ) 2019 ರ ಬ್ಯಾಚ್ನ ಪದವಿ ಪ್ರದಾನ ಸಮಾರಂಭದಲ್ಲಿ ಸಚಿವ ಶರಣ ಪ್ರಕಾಶ್ ಪಾಟೀಲ್ ಮಾತನಾಡಿದರು.
ಪ್ರತಿ ವರ್ಷ ಐದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗುತ್ತಾರೆ, ಆದರೆ ಇದಕ್ಕೆ ಪ್ರತಿಯಾಗಿ ಒಂದು ಲಕ್ಷ ವೈದ್ಯಕೀಯ ಸೀಟುಗಳು ಮಾತ್ರ ಲಭ್ಯವಿದೆ. ಇದರಿಂದ ಬೇಡಿಕೆ ಮತ್ತು ಪೂರೈಕೆ ನಡುವಿನ ಅಂತರ ಹೆಚ್ಚಾಗುತ್ತಿದೆ ಎಂದು ಹೇಳಿದರು.
“ಈ ಅಸಮಾನತೆಯನ್ನು ತಕ್ಷಣ ನಿವಾರಿಸಬೇಕು. ಭಾರತದಲ್ಲಿ ತರಬೇತಿ ಪಡೆಯಲಿರುವ ವೈದ್ಯರು ವಿದೇಶದಲ್ಲಿಯೂ ಹೆಚ್ಚು ಮನ್ನಣೆ ಗಳಿಸುತ್ತಿದ್ದಾರೆ. ನಮ್ಮ ವೈದ್ಯರು ಜಗತ್ತಿನ ಎಲ್ಲೆಡೆ ಚಿಕಿತ್ಸೆ ಒದಗಿಸುತ್ತಿದ್ದಾರೆ” ಎಂದು ಅವರು ಹೇಳಿದರು,
ಭಾರತೀಯ ವೈದ್ಯರಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆ
ಜಾಗತಿಕವಾಗಿ ಭಾರತೀಯ ವೈದ್ಯಕೀಯ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆ ಇದೆ. ಬೇಡಿಕೆ ಮತ್ತು ಲಭ್ಯತೆಯ ಅಂತರ ಕಡಿಮೆ ಮಾಡಲು ಎನ್ಎಂಸಿ ಮಧ್ಯಪ್ರವೇಶಿಸಬೇಕು” ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ವೇದಿಕೆಯ ಮೇಲೆ ಹಾಜರಿದ್ದ ಎನ್ಎಂಸಿ ಅಧ್ಯಕ್ಷರಾದ ಡಾ. ಬಿ.ಎನ್. ಗಂಗಾಧರ ಅವರಿಗೆ ಈ ಕುರಿತು ಸಚಿವರು ಮನವರಿಕೆ ಮಾಡಿಕೊಟ್ಟರು.
ಈ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ಹೆಚ್ಚುವರಿಯಾಗಿ 800 ಪದವಿಪೂರ್ವ ಮತ್ತು 600 ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ ಅನುಮೋದನೆ ಕೋರಿ ಎನ್ಎಂಸಿ ಗೆ ಈಗಾಗಲೇ ಔಪಚಾರಿಕ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು
ಅತಿ ಶೀಘ್ರದಲ್ಲೇ ಪ್ರತಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು
ಆರೋಗ್ಯ ಮೂಲಸೌಕರ್ಯವನ್ನು ವಿಸ್ತರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಸದಾ ಬದ್ಧವಾಗಿದೆ. ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಈ ಪ್ರತಿಯೊಂದು ಕಾಲೇಜುಗಳು ಆಸ್ಪತ್ರೆಯನ್ನು ಹೊಂದಿರುತ್ತವೆ ಮತ್ತು ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆರೈಕೆ ಘಟಕಗಳು, ಆಘಾತ ಕೇಂದ್ರಗಳು ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಗುರಿಯನ್ನು ನಾವು ಹೊಂದಿದ್ದೇವೆ” ಎಂದು ಶರಣ ಪ್ರಕಾಶ್ ಪಾಟೀಲ್ ವಿವರಿಸಿದರು.
“ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಹಲವು ಯೋಜನೆಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಶೀಘ್ರದಲ್ಲೇ, ವೈದ್ಯಕೀಯ ಕಾಲೇಜುಗಳಿಲ್ಲದ ಜಿಲ್ಲೆಗಳಲ್ಲಿ ಸಂಪೂರ್ಣ ಸುಸಜ್ಜಿತ ಸಂಸ್ಥೆಗಳನ್ನು ಆರಂಭಿಸಲಾಗುತ್ತದೆ. ಇದು ಆರ್ಥಿಕವಾಗಿ ದುರ್ಬಲ ವರ್ಗಗಳ ಅರ್ಹ ವಿದ್ಯಾರ್ಥಿಗಳು ಸರ್ಕಾರಿ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಡುತ್ತದೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲರು ಆಶಯ ವ್ಯಕ್ತಪಡಿಸಿದರು.
ಎನ್ಎಂಸಿ ಅಧ್ಯಕ್ಷರಾದ ಡಾ. ಗಂಗಾಧರ ಅವರು ಭಾಷಣ ಮಾಡಿ, ಜಾಗತಿಕ ಮಟ್ಟದಲ್ಲಿ ಸುಮಾರು 3 ಕೋಟಿ ವೈದ್ಯರ ಕೊರತೆ ಇದೆ ಎಂದರು.
ಯುವ ಪೀಳಿಗೆಯು ವೈದ್ಯಕೀಯ ವೃತ್ತಿಯನ್ನು ಕೈಗೆತ್ತಿಕೊಳ್ಳಬೇಕು. ಭಾರತೀಯ ವೈದ್ಯರಿಗೆ ವಿಶ್ವಾದ್ಯಂತ ಹೆಚ್ಚಿನ ಬೇಡಿಕೆಯಿದೆ, ಗಟ್ಟಿಯಾದ ಶೈಕ್ಷಣಿಕ ಅಡಿಪಾಯ ಮತ್ತು ಇಂಗ್ಲಿಷ್ ಪ್ರಾವೀಣ್ಯತೆ ಹೊಂದಿರುವ ಭಾರತೀಯರು ವಿಶ್ವಮಟ್ಟದಲ್ಲಿ ಮನ್ನಣೆ ಗಳಿಸಿದ್ದಾರೆ. ವೈದ್ಯಕೀಯ ವೃತ್ತಿಪರರ ಸಂಖ್ಯೆ ಹೆಚ್ಚಳ ಮಾಡಲು ಎನ್ಎಂಸಿ ಯ ಪ್ರಮುಖ ಗುರಿಗಳಲ್ಲಿ ಒಂದಾಗಿದೆ” ಎಂದು ಹೇಳಿದರು.
ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ಬಿ.ಎಲ್ ಮತ್ತು ಎಸ್ಎಬಿವಿಎಂಸಿ ನಿರ್ದೇಶಕ ಡಾ. ಮನೋಜ್ ಕುಮಾರ್ ಹೆಚ್.ವಿ ಉಪಸ್ಥಿತರಿದ್ದರು.
ENGLISH SUMMARY…
Karnataka Urges NMC to Hike Medical Seats Amid Growing NEET Aspirants
Bengaluru, April 23 – Expressing concern over the widening gap between the number of NEET aspirants and available medical seats, the Karnataka government on Wednesday urged the National Medical Commission (NMC) to significantly increase undergraduate medical seats across the country.
Speaking at the graduation ceremony of the 2019 batch of Sri Atal Bihari Vajpayee Medical College and Research Institute (SABVMC), minister for medical education and skill development Dr. Sharan Prakash Patil, said over five lakh students appear for the NEET examination every year, but only around one lakh medical seats are available.
“This disparity needs immediate attention. The doctors we train in India are not just for our country, but for the world,” he said, pointing to the rigorous training and high demand for Indian medical professionals globally. “There is a stark mismatch between demand and availability. The NMC must intervene,” he said, addressing NMC chairperson Dr. B.N. Gangadhara, who was present at the event.
A formal proposal has already been sent to the NMC seeking approval for an additional 800 undergraduate and 600 postgraduate medical seats in Karnataka starting this academic year.
Reiterating the state’s commitment to expanding healthcare infrastructure, the minister emphasized the government’s plan to establish a medical college in every district. “Each of these colleges will be equipped with a hospital and we aim to set up cancer care units, trauma centres and super-speciality hospitals in every district,” he said. “The chief minister has approved this initiative. Soon, districts without medical colleges will have fully equipped institutions, allowing deserving students from economically weaker sections to pursue medicine at government expense.”
NMC chairperson Dr. Gangadhara, in his address highlighted the global shortage of nearly 3 crore doctors and encouraged the younger generation to take up medical careers. “Indian doctors are in great demand worldwide, thanks to their strong academic foundation and English proficiency. One of NMC’s key goals is to produce globally recognized medical professionals,” he said.
Also present at the event were Shivajinagar MLA Rizwan Arshad, principal secretary of medical education Mohammed Mohsin, director of medical education Dr. Sujatha Rathod B.L and SABVMC director Dr. Manoj Kumar H.V.
Key words: Minister, Sharan Prakash Patil, NMC, increase medical, seats