ಪಹಲ್ಗಾಮ್ ಉಗ್ರರ ದಾಳಿ : ಸುಪ್ರಿಂಕೋರ್ಟ್ ನಲ್ಲಿ ‘PIL’ ಸಲ್ಲಿಕೆ

ನವದೆಹಲಿ,ಏಪ್ರಿಲ್,23,2025 (www.justkannada.in):  ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ  ನಿನ್ನೆ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣಖ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಇದೀಗ ಉಗ್ರರ ದಾಳಿ ಕುರಿತು ಸುಪ್ರೀಂ ಕೋರ್ಟ್ ಅಲ್ಲಿ ಪಿಐಎಲ್ ಸಲ್ಲಿಕೆ ಮಾಡಲಾಗಿದೆ.  ನಿನ್ನೆ ನಡೆದ  ಉಗ್ರರ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಹಾಗೂ ಬೆಂಗಳೂರು ಮೂಲದ ಭರತ್ ಭೂಷಣ್ ಅವರು ಬಲಿಯಾಗಿದ್ದು ಅವರ ಮೃತದೇಹವನ್ನ ರಾಜ್ಯಕ್ಕೆ ತರಲು ವ್ಯವಸ್ಥೆ ಮಾಡಲಾಗಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಮಿತಿ ಸಭೆ ನಡೆಯುತ್ತಿದ್ದು ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವೆಲ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮೂರು ಸೇನೆಯ ಮುಖ್ಯಸ್ಥರು ಭಾಗಿಯಾಗಿದ್ದಾರೆ.

Key words: Pahalgam, terrorist,  attack,  PIL, Supreme Court