ಚಾಮರಾಜನಗರ,ಏಪ್ರಿಲ್,24,2025 (www.justkannada.in): ರಾಜ್ಯದಲ್ಲಿ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಮಲೇಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ‘ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಪಡಿಸಿದ್ದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದರು.
ಜನರ ನಿರೀಕ್ಷೆಗಳನ್ನು ಈಡೇರಿಸಲೆಂದೇ ಇಡೀ ಸರ್ಕಾರ ಜಿಲ್ಲೆಗೆ ಬಂದಿದೆ. ‘ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸುವ ಮೂಲಕ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: Congress government, developed, religious places, DCM DK Shivakumar