18 ಶಾಸಕರ ಅಮಾನತು ರದ್ದುಪಡಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು, ಏಪ್ರಿಲ್,​​ 28,2025 (www.justkannada.in): 16 ಬಿಜೆಪಿ ಶಾಸಕರನ್ನ ಸದನದಿಂದ 6 ತಿಂಗಳ ಕಾಲ ಅಮಾನತು ಮಾಡಿ ವಿಧಾನಸಭೆ ಸ್ಪೀಕರ್  ಯುಟಿ ಖಾದರ್ ಹೊರಡಿಸಿದ ಆದೇಶವನ್ನ ರದ್ದುಗೊಳಿಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಬಿಜೆಪಿ ನಿಯೋಗ ಮನವಿ ಮಾಡಿದೆ.

ಇಂದು ರಾಜ್ಯಪಾಲ ಥಾವರ್ ಚಂದ್ ಅವರನ್ನ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದ್ದು, 18 ಶಾಸಕರ ಅಮಾನತು ರದ್ಧುಪಡಿಸುವಂತೆ ಮನವಿ ಮಾಡಿದೆ.

ಹನಿಟ್ರ್ಯಾಪ್​ ಮತ್ತು ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ವಿಚಾರವಾಗಿ ಇತ್ತೀಚೆಗೆ ವಿಧಾನಸಭೆಯಲ್ಲಿ ಚರ್ಚೆ ವೇಳೆ ಭಾರೀ ಗಲಾಟೆ ನಡೆದಿತ್ತು. ವಿಧಾನಸಭೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು 6 ತಿಂಗಳು ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ಆದೇಶ ಹೊರಡಿಸಿದ್ದರು.

ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ,  ಶಾಸಕರ ಅಮಾನತು ಸಂಬಂಧ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಪ್ರಜಾಪ್ರಭುತ್ವ ವಿರೋಧಿ ನಡೆಯಿಂದ ರಾಜ್ಯ ಸರ್ಕಾರ ಹಿಂದಡಿ ಇಡಬೇಕು. ರಾಜ್ಯಪಾಲರು ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

Key words: BJP, complaint, Governor, suspension, 18 MLAs