ಬಸವಣ್ಣನವರನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ 30,2025 (www.justkannada.in): ಜಗಜ್ಯೋತಿ ಬಸವಣ್ಣನವರನ್ನ ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಬಸವ ಜಯಂತಿಯ  ಶುಭಾಶಯಗಳನ್ನು ತಿಳಿಸಿದರು.

ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು  ಸಿಎಂ ಸಿದ್ದರಾಮಯ್ಯ  ತಿಳಿಸಿದರು.

Key words: Kannadigas, Indians, remember, Basavanna, CM Siddaramaiah