ರಾಮನಗರ, ಅಕ್ಟೋಬರ್ 13, 2019 (www.justkannada.in): ಮಾಜಿ ಡಿಸಿಎಂ ಪರಮೇಶ್ವರ್ ಮೇಲೆ ಐಟಿ ದಾಳಿ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಪರಮೇಶ್ವರ್ ಪಿಎ ರಮೇಶ್ ಅಂತ್ಯಕ್ರಿಯೆ ಇಂದು ಬೆಳಗ್ಗೆ 11 ಗಂಟೆಗೆ ರಾಮನಗರದ ಸ್ವಗ್ರಾಮ ಮೇಳೆಹಳ್ಳಿಯಲ್ಲಿ ನಡೆಯಲಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಯಿತು. ಮೃತದೇಹ ನೋಡುತ್ತಿದ್ದಂತೆಯೇ ರಮೇಶ್ ಪತ್ನಿ, ತಾಯಿ-ತಂದೆ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇಂದು ಬೆಳಗ್ಗೆ 11 ಗಂಟೆಯ ನಂತರ ಸ್ವಗ್ರಾಮದಲ್ಲಿನ ರಮೇಶ್ ಜಮೀನಿನಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗುವುದು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.