ಬಾಗಲಕೋಟೆ,ಅ,23,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧಿತರಾಗಿ ಜೈಲುವಾಸ ಅನುಭವಿಸುತ್ತಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್ಗೆ ದೆಹಲಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ದೆಹಲಿ ಹೈಕೋರ್ಟ್ ನಲ್ಲಿ ನ್ಯಾಯ ಸಿಕ್ಕಿದ್ದು ನಮಗೆ ಸಂತೋಷ ತಂದಿದೆ ಎಂದಿದ್ದಾರೆ.
ಬಾಗಲಕೋಟೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಗೆ ಇದಕ್ಕೂ ಮೊದಲೇ ಇಡಿ ಕೋರ್ಟ್ ನಲ್ಲೇ ಜಾಮೀನು ಸಿಗಬೇಕಿತ್ತು. ಆದರೆ ದೆಹಲಿ ಹೈಕೋರ್ಟ್ ನಲ್ಲಿ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಇದರಿಂದ ನ್ಯಾಯ ಸಿಕ್ಕಂತಾಗಿದೆ ಎಂದು ನುಡಿದರು.
ಹಾಗೆಯೇ ಕೇಂದ್ರ ಸರ್ಕಾರದ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಕೋರ್ಟ್ ನಲ್ಲಿ ತಪ್ಪಿತಸ್ಥ ಎಂಬುದು ಸಾಬೀತಾದ ಮೇಲೆ ಜೈಲಿಗೆ ಹೋಗಿವುದು ಸರಿ. ಆದರೆ ತನಿಖೆ ಹಂತದಲ್ಲಿಯೇ ಜೈಲಿಗೆ ಕಳಿಸಿರುವುದು ಸರಿಯಾದ ಕ್ರಮವಲ್ಲ. ಇದು ದ್ವೇಷದ ರಾಜಕಾರಣ ಎಂದು ಕಿಡಿಕಾರಿದರು.
Key words: Former minister- DK Sivakumar -granted –bail-Former CM- Siddaramaiah –reaction