ಕಲ್ಬುರ್ಗಿ,ಮೇ,16,2019(www.justkannada.in): ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ಬೇಕಿತ್ತು ಎಂಬ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ ಮತ್ತು ಸಿಎಂ ಸ್ಥಾನಕ್ಕೆ ರೇವಣ್ಣ ಕೂಡ ಅರ್ಹರು ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಟೀಕಿಸಿದ ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ, ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಯಾವುದು ಸರಿಯಿಲ್ಲ ಎಂಬುದು ಸಾಬೀತಾಗಿದೆ ಎಂದು ನುಡಿದರು.
ಈ ಬಗ್ಗೆ ಇಂದು ಮಾಧ್ಯಮದ ಜತೆ ಮಾತನಾಡಿದ ಅರವಿಂದ ಲಿಂಬಾವಳಿ, ಖರ್ಗೆ ಸಿಎಂ ಆಗಲಿ ಅಂತಾ ಹೆಚ್.ಡಿ ಕುಮಾರಸ್ವಾಮಿ ಹೇಳ್ತಾರೆ. ಈ ಕಡೆ ರೇವಣ್ಣ ಸಿಎಂ ಸ್ಥಾನಕ್ಕೆ ಅರ್ಹರು ಅಂತಾ ಸಿದ್ದರಾಮಯ್ಯ ಹೇಳ್ತಾರೆ. ಮತ್ತೊಂದೆಡೆ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಅಂತಾ ಪೂಜೆ ಮಾಡಿಸುತ್ತಾರೆ. ಈ ಹೇಳಿಕೆ ಮೂಲಕ ಸರ್ಕಾರದಲ್ಲಿ ಯಾವುದು ಸರಿಯಿಲ್ಲ ಎಂಬುದು ಸಾಬೀತಾಗಿದೆ ಎಂದು ಹೇಳಿದರು.
ಹಾಗೆಯೇ ಅಪರೇಷನ್ ಹಸ್ತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅರವಿಂದ ಲಿಂಬಾವಳಿ, ಇರುವವರನ್ನೇ ತಮ್ಮಲ್ಲಿ ಇಟ್ಟುಕೊಳ್ಳಲು ಆಗದವರು ಹೇಗೆ ಅಪರೇಷನ್ ಮಾಡ್ತಾರೆ ಎಂದು ಲೇವಡಿ ಮಾಡಿದರು.
Key words: Prove -everything – not r-ight. – government- BJP leader -Arvind Limbavali