ನವದೆಹಲಿ,ನ,1,2019(www.justkannada.in): ನಾಡಿನೆಲ್ಲೆಡೆ 64ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಜನತೆಗೆ ಶುಭಕೋರಿದ್ದಾರೆ.
ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿನವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾಗಿದ್ದು. ಬಹುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವಿಟ್ ಮಾಡಿ, ದೇಶದ ಬೆಳವಣಿಗೆಗೆ ಕನ್ನಡಿಗರ ಕೊಡುಗೆ ಸೇವೆ ವಿಶಿಷ್ಟವಾದದ್ದು. ಕನ್ನಡ ನಾಡು ಮತ್ತಷ್ಟು ಅಭಿವೃದ್ಧಿಯಾಗಲಿ. ಕನ್ನಡ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಶುಭಕೋರಿದ್ದಾರೆ.
Key words: Prime Minister -Modi – Amit Shah – Twitter -Kannada Rajyotsava