ಬೆಳಗಾವಿ,ಮೇ,18,2019(www.justkannada.in): ಮೈತ್ರಿ ಪಕ್ಷಗಳ ಗೊಂದಲಗಳಿಗೆ ಸರ್ಕಾರ ವಿಸರ್ಜನೆಯೊಂದೇ ಪರಿಹಾರ ಎಂದು ಹೇಳುವ ಮೂಲಕ ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿ ಹೊಸಬಾಂಬ್ ಸಿಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ರಾಜ್ಯದಲ್ಲಿ ಜೆಡಿಎಸ್ ಮೂರು ಬಾರಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದೆ. ಮೂರು ಬಾರಿಯೂ ಗೊಂದಲಗಳಿಂದ ಸರ್ಕಾರ ಪತನವಾದ ಇತಿಹಾಸವಿದೆ. ಹೀಗಾಗಿ ಅನಿವಾರ್ಯದಿಂದ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ನಡೆಸಬೇಕು. ಇಲ್ಲವಾದರೇ ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಬೇಕು ಎಂದಿದ್ದಾರೆ.
ಗೊಂದಲದಲ್ಲಿ ಸರ್ಕಾರ ನಡೆಸಲು ಸಾಧ್ಯವಿಲ್ಲ. ಉಸಿರುಗಟ್ಟುವ ವಾತಾವರಣದಲ್ಲಿ ಸರ್ಕಾರ ನಡೆಸೋದು ಕಷ್ಟವಾಗುತ್ತದೆ. ಗೊಂದಲದಲ್ಲಿ ಸರ್ಕಾರ ನಡೆಸುವುದಕ್ಕಿಂತ ವಿಸರ್ಜನೆ ಮಾಡಿ ಮತ್ತೊಮ್ಮೆ ಚುನಾವಣೆಗೆ ಹೋಗಬೇಕೆಂಬುದು ನನ್ನ ಅಭಿಪ್ರಾಯ ಎಂದು ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
Key words: confusion of coalition parties is the only solution Let’s go back to elections
#Politicalnews #basavarajahoratti #Coalitiongovernment