ನವದೆಹಲಿ,ಡಿ,4,2019(www.justkannada.in): ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಮೂಲಕ ಪಿ.ಚಿದಂಬರಂಗೆ ಬಿಗ್ ರಿಲೀಫ್ ಸಿಕ್ಕಿದ್ದು 106 ದಿನಗಳ ಜೈಲುವಾಸ ಅಂತ್ಯವಾಗಿದೆ. ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಆರ್ ಭಾನುಮತಿ ನೇತೃತ್ವದ ತ್ರಿಸದಸ್ಯಪೀಠ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇಬ್ಬರು ಶ್ಯೂರಿಟಿ ನೀಡಬೇಕು 2 ಲಕ್ಷ ಠೇವಣಿ ನೀಡಬೇಕು. ಅಧಿಕಾರಿಗಳ ವಿಚಾರಣೆಗೆ ಸಹಕರಿಸಬೇಕು. ಪಾಸ್ ಪೂರ್ಟ್ ವಶಕ್ಕೆ ನೀಡುವಂತೆ ಸುಪ್ರೀಂಕೋರ್ಟ್ ಷರತ್ತು ವಿಧಿಸಿದೆ. ಹಾಗೆಯೇ ಸಾರ್ವಜನಿಕ ಹೇಳಿಕೆ, ಸಂದರ್ಶನ ನೀಡದಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 16ರಂದು ಪಿ.ಚಿದಂಬರಂ ಅವರನ್ನ ಬಂಧಿಸಲಾಗಿತ್ತು. ಜಾಮೀನು ನೀಡುವಂತೆ ಪಿ. ಚಿದಂಬರಂ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನ ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಇದೀಗ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
Key words: former Union Minister- P Chidambaram- Supreme Court- granted- conditional bail.