ನವದೆಹಲಿ,ಡಿ,25,2019(www.justkannada.in): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪೇಯಿ ಅವರ ಕನಸಿನ ಭೂಜಲ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೂಜಲ ಯೋಜನೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಈ ಯೋಜನೆ ಅಟಲ್ ಬಿಹಾರಿ ವಾಜಿಪೇಯಿ ಅವರ ಕನಸಿನ ಯೋಜನೆಯಾಗಿತ್ತು. ಇದು ರಾಷ್ಟ್ರಕ್ಕೆ ಬಹಳ ಮುಖ್ಯವಾದ ಯೋಜನೆಯಾಗಿದ್ದು, ಅಟಲ್ ಜಿ ಗೆ ಸಮರ್ಪಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ರಾಜಸ್ತಾನ, ಮಧ್ಯ ಪ್ರದೇಶ, ಹರ್ಯಾಣ ಮತ್ತು ಉತ್ತರ ಪ್ರದೇಶಗಳಲ್ಲಿ ಸಮುದಾಯಗಳ ಭಾಗವಹಿಸುವಿಕೆಯ ಮೂಲಕ ಅಂತರ್ಜಲ ನಿರ್ವಹಣೆ ಸುಧಾರಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಈ ಯೋಜನೆ ಜಾರಿಗೆ ಬಂದರೆ 78 ಜಿಲ್ಲೆಗಳ 8 ಸಾವಿರದ 350 ಗ್ರಾಮ ಪಂಚಾಯತ್ ಗಳಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಅಂತರ್ಜಲ ಹೆಚ್ಚಿಸಲು ಅಂತರ್ಜಲ ರಕ್ಷಣೆಗೆ ತುರ್ತುಕ್ರಮ ಕೈಗೊಳ್ಳಲಾಗುತ್ತದೆ. ನೀರಿನ ಬಳಕೆ ಬಗ್ಗೆ ಜಾಗೃತಿ ಮೂಡಿಸಬೇಕು. ರೈತರು ಕುಡಿಯುವ ನೀರಿಗಾಗಿ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
Key words: PM Modi -launches -Atal Bihari Vajpayee -dream -boojala project