ಮೈಸೂರು,ಡಿ,26,2019(www.justkannada.in): ಕೇಂದ್ರದ ಸಿ.ಎ.ಎ ಮತ್ತು ಎನ್.ಆರ್.ಸಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಮೈಸೂರು ಯುನೈಟೆಡ್ ಮುಸ್ಲಿಂ ವೆಲ್ ಫೇರ್ ಟ್ರಸ್ಟ್ ಸೇರಿದಂತೆ ವಿವಿಧ ಸಂಘಟನೆಗಳು ನಗರದ ಟೌನ್ ಹಾಲ್ ಮೈದಾನದಲ್ಲಿ ಪ್ರತಿಭಟನೆ ನಡೆಸುತ್ತಿವೆ. ಪ್ರತಿಭಟನೆ ಹಿನ್ನೆಲೆ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆಯಾಗಿ ಮೈಸೂರು ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಭದ್ರತೆಗಾಗಿ 5 ಸಾವಿರ ಪೊಲೀಸರು, 10 ಕೆ.ಎಸ್.ಆರ್.ಪಿ., 15 ಸಿ.ಎ.ಆರ್. ತುಕಡಿಗಳ ಜೊತೆಗೆ ಅಶ್ವಾರೋಹಿ ಪಡೆಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿತ್ತು ಟೌನ್ ಹಾಲ್ ಮೈದಾನ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿ 145 ಸಿ.ಸಿ ಕ್ಯಾಮರಾಗಳು ಅಳವಡಿಕೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗಿತ್ತು.
ಪ್ರತಿಭಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು. ಪ್ರತಿಭಟನೆ ಹಿನ್ನೆಲೆ ಟೌನ್ ಹಾಲ್ ಬಳಿ ಮೆಟಲ್ ಡಿಟೆಕ್ಟರ್ ಹಾಗೂ ಇನ್ನಿತರ ಸಾಧನಗಳಿಂದ ಪ್ರತಿಯೊಬ್ಬರನ್ನು ಪರಿಶೀಲಿಸಿ ಒಳಗೆ ಬಿಡುತ್ತಿದ್ದು, ಟೌನ್ ಹಾಲ್ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಇನ್ನು ಪ್ರತಿಭಟನಾಕಾರರು ಪೋಲೀಸರಿಗೆ ಹೂ ನೀಡಿ ಶುಭಕೋರಿದರು. ಗುಲಾಬಿ ಹೂ ನೀಡಿ ಶಾಂತಿಯುವ ಪ್ರತಿಭಟನೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.
Key words: Massive -protests – Mysore –against- CAA -police -flowers