ಮೈಸೂರು,ಡಿ,27,2019(www.justkannada.in): ಹೊಸ ವರ್ಷವನ್ನು ಬರಮಾಡಿಕೊಳ್ಳಲು ವಿಶ್ವದಾದ್ಯಂತ ಜನರು ಭರದ ಸಿದ್ದತೆಯಲ್ಲಿ ತೊಡಗಿದ್ದು ಈ ನಡುವೆ ಇತ್ತ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ನೂತನ ವರ್ಷವನ್ನು ಬರ ಮಾಡಿಕೊಳ್ಳಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.
ಹೊಸ ವರ್ಷಾಚರಣೆ ಅಂಗವಾಗಿ ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸವರ್ಷದ ಮೊದಲ ದಿನ ಭಕ್ತರಿಗೆ ಬರೋಬ್ಬರಿ 2 ಲಕ್ಷ ತಿರುಪತಿ ಮಾದರಿಯ ಲಡ್ಡುಗಳನ್ನು ವಿತರಿಸಲು ತಯಾರಿ ನಡೆಸಲಾಗಿದೆ. ಯೋಗಾನರಸಿಂಹಸ್ವಾಮಿ ದೇಗುಲ ಸುದರ್ಶನ ನರಸಿಂಹ ಕ್ಷೇತ್ರವೆಂದೇ ಹೆಸರುವಾಸಿಯಾಗಿದೆ. 1994 ರಿಂದಲೂ ಹೋದವರ್ಷದ ಮೊದಲ ದಿನ ಈ ರೀತಿ ಒಂದು ಸಾವಿರ ಲಡ್ಡುಗಳನ್ನು ವಿತರಿಸಲಾಗಿತ್ತು. ನಂತರದ ವರ್ಷಗಳಲ್ಲಿ ಅದಕ್ಕಿಂತಲೂ ಹೆಚ್ಚಿನ ಪ್ರಮಾಣದ ಲಡ್ಡುಗಳನ್ನು ವಿತರಿಸುವ ಮೂಲಕ ನೂತನ ವರ್ಷವನ್ನು ಬರ ಮಾಡಿಕೊಳ್ಳಲಾಗಿತ್ತು.
ಈ ಬಾರಿ ಎರಡು ಲಕ್ಷ ಲಡ್ಡುಗಳನ್ನು ವಿತರಿಸಲು ತಯಾರಿ ನಡೆಸಲಾಗಿತ್ತಿದ್ದು ಕಳೆದ ಡಿ.20ರಿಂದಲೇ ಲಡ್ಡುಗಳನ್ನು ತಯಾರಿಸುವ ಕಾರ್ಯ ಆರಂಭವಾಗಿದೆ. ಡಿಸೆಂಬರ್ 31ಕ್ಕೆ ಲಡ್ಡುಗಳ ತಯಾರಿ ಕಾರ್ಯ ಅಂತ್ಯ.ವಾಗಲಿದ್ದು, 50 ಮಂದಿ ನುರಿತ ಬಾಣಸಿಗರು ಲಡ್ಡುಗಳನ್ನ ತಯಾರಿಸುತ್ತಿದ್ದಾರೆ.
ಲಡ್ಡುಗಳ ತಯಾರಿಗಾಗಿ 50 ಕ್ವಿಂಟಾಲ್ ಕಡ್ಲೆಹಿಟ್ಟು, 100 ಕ್ವಿಂಟಾಲ್ ಸಕ್ಕರೆ, 4,000 ಲೀಟರ್ ಖಾದ್ಯ ತೈಲ, 200 ಕೆ.ಜಿ ಗೋಡಂಬಿ, 200 ಕೆ.ಜಿ ಒಣದ್ರಾಕ್ಷಿ, 100 ಕೆ.ಜಿ ಬಾದಾಮಿ, 200 ಕೆ.ಜಿ ಡೈಮಂಡ್ ಸಕ್ಕರೆ, 500 ಕೆ.ಜಿ ಬೂರಾ ಸಕ್ಕರೆ, 10 ಕೆ.ಜಿ ಪಿಸ್ತಾ, 20 ಕೆ.ಜಿ ಏಲಕ್ಕಿ, 20 ಕೆ.ಜಿ ಜಾಕಾಯಿ ಮತ್ತು ಜಾಪತ್ತೆ, 5 ಕೆ.ಜಿ ಕರ್ಪೂರ, 100 ಕೆ.ಜಿ ಲವಂಗ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಕುರಿತು ಯೋಗನರಸಿಂಗಸ್ವಾಮಿ ದೇಗುಲದ ಸಂಸ್ಥಾಪಕರಾದ ಭಾಷ್ಯಂ ಸ್ವಾಮೀಜಿ ಮಾಹಿತಿ ನೀಡಿದರು.
Key words: mysore- ready – new year – Prepare – delivery – two lakh- laddus