ಮಂತ್ರಿಗಿರಿಗಾಗಿ ತೀವ್ರಗೊಂಡ ಲಾಬಿ: ಸಿಎಂ ಬಿಎಸ್ ವೈ ನಿವಾಸಕ್ಕೆ ಸಚಿವಾಕಾಂಕ್ಷಿಗಳು ಭೇಟಿ…

ಬೆಂಗಳೂರು,ಜ,17,2020(www.justkannada.in): ಸಿಎಂ ಬಿಎಸ್ ಯಡಿಯೂರಪ್ಪಗೆ ರಾಜ್ಯ ಸಚಿವ ವಿಸ್ತರಣೆ ಕಗ್ಗಂಟಾಗಿದ್ದು ರಾಜ್ಯಕ್ಕೆ ನಾಳೆ ಆಗಮಿಸಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆ ಚರ್ಚೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸಲಿದ್ದಾರೆ ಎನ್ನಲಾಗುತ್ತಿದೆ.

ಸಂಪುಟ ವಿಸ್ತರಣೆ ಬಗ್ಗೆ ಅಮಿತ್ ಶಾ ಜತೆ ಚರ್ಚಿಸಲು ಸಿಎಂ ಬಿಎಸ್ ವೈ ನಿರ್ಧರಿಸಿರುವ ಹಿನ್ನೆಲೆ ಸಚಿವಾಕಾಂಕ್ಷಿಗಳು ಕೊನೆಯ ಹಂತದ ಕಸರತ್ತು ನಡೆಸುತ್ತಿದ್ದು ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಬಿಎಸ್ ವೈ ನಿವಾಸಕ್ಕೆ ಪರೇಡ್ ನಡೆಸುತ್ತಿದ್ದಾರೆ. ಈ ನಡುವೆ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಶಾಸಕ ಉಮೇಶ್ ಕತ್ತಿ ಭೇಟಿ ನೀಡಿ ಸಿಎಂ ಬಳಿ ಚರ್ಚಿಸಿದ್ದಾರೆ.

ಹಾಗೆಯೇ ಹೊಳಲ್ಕೆರೆ ಶಾಸಕ ಚಂದ್ರಪ್ಪ ಮಹಾಲಕ್ಷ್ಮೀ ಲೇಔಟ್ ಶಾಸಕ ಗೋಪಾಲಯ್ಯ, ಉಪಚುನಾವಣೆಯಲ್ಲಿ ಸೋತಿರುವ  ಎಂಟಿಬಿ ನಾಗರಾಜ್ ಸಹ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ತನ್ನನ್ನ ಎಂಎಲ್ ಸಿ ಮಾಡಿ ಸಚಿವರನ್ನಾಗಿ ಮಾಡುವಂತೆ ಎಂಟಿಬಿ ನಾಗರಾಜ್ ಸಿಎಂ ಬಿಎಸ್ ವೈಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ನಾಳೆ ರಾಜ್ಯಕ್ಕೆ ಆಗಮಿಸಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ನಂತರ ತೀರ್ಮಾನ ಮಾಡಲಾಗುತ್ತದೆ ಎಂದು ಸಿಎಂ ಬಿಎಸ್ ವೈ ತಿಳಿಸಿದ್ದಾರೆ.

Key words: cabinet-expansion-cm bs yeddyurappa-residence-MLAs -visit