ಬೆಂಗಳೂರು,ಜ,17,2020(www.justkannada.in): ಕೆಪಿಸಿಸಿ ಅಧ್ಯಕ್ಷ ಸ್ಥಾನ ನೇಮಕ ಮಾಡುಲು ತೀವ್ರ ಕಸರತ್ತು ನಡೆಸುತ್ತಿರುವ ಹೈಕಮಾಂಡ್ ಮುಂದೆ ನಾಲ್ಕು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಸೃಷ್ಠಿಸುವಂತೆ ಬೇಡಿಕೆ ಇಟ್ಟಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಲ್ ಪಿ ನಾಯಕ ಸ್ಥಾನ ಮತ್ತು ವಿಪಕ್ಷ ನಾಯಕ ಸ್ಥಾನ ಬೇರ್ಪಡಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ನಾಲ್ಕು ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ಸೃಷ್ಠಿ ಬಗ್ಗೆ ಇಂದು ಸಿದ್ದರಾಮಯ್ಯ ತಮ್ಮ ಕಾವೇರಿ ನಿವಾಸದಲ್ಲಿ ಮಾಜಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಕೆ.ಜೆ ಜಾರ್ಜ್,ಕೃಷ್ಣಭೈರೇಗೌಡರ ಜತೆ ಚರ್ಚಿಸಿದರು.
ವಿಪಕ್ಷ ನಾಯಕ ಸಿಎಲ್ ಪಿ ಸ್ಥಾನ ಬೇರ್ಪಡಿಸಲು ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದು ಎರಡು ಹುದ್ದೆಗಳನ್ನ ಬೇರ್ಪಡಿಸಿದರೇ ರಾಜೀನಾಮೆ ನೀಡುವುದಾಗಿ ಆಪ್ತರ ಬಳಿ ಹೇಳಿಕೊಂಡಿದ್ದಾ. ಯಾರಾದರೂ ವಿಪಕ್ಷ ನಾಯಕರಾಗಿಲಿ ಆದ್ರೆ ಎರಡು ಹುದ್ದೆಗಳನ್ನ ಬೇರ್ಪಡಿಸಬಾರದು ಎಂದು ಸಿದ್ದರಾಮಯ್ಯ ಆಪ್ತರ ಬಳಿ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ನೇಮಕ ಮತ್ತು ಹೆಚ್ಚುವರಿ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಕೆ.ಜೆ ಜಾರ್ಜ್, ಮೊದಲು ಕೆಪಿಸಿಸಿ ಅಧ್ಯಕ್ಷರ ನೇಮಕವಾಗಬೇಕು ನಂತರ ಕಾರ್ಯಧ್ಯಕ್ಷರ ವಿಚಾರ. ಸಿಎಲ್ ಪಿ ವಿಪಕ್ಷ ನಾಯಕರ ವಿಚಾರದಲ್ಲಿ ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದಷ್ಟು ಬೇಗ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡಬೇಕೆನ್ನುವುದು ನನ್ನ ಅಭಿಪ್ರಾಯ ಎಂದರು.
Key words: Former CM -Siddaramaiah -opposes -separation – CLP – Opposition leader