ನವದೆಹಲಿ,ಜ,29,2020(www.justkannada.in): ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮದಾನ ತಿರಸ್ಕರಿಸಿದ್ದನ್ನ ಪ್ರಶ್ನಿಸಿ ಅಪರಾಧಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ನಾಲ್ವರು ಅಪರಾಧಿಗಳಿಗೆ ಫೆಬ್ರವರಿ 1 ಗಲ್ಲುಶಿಕ್ಷೆ ಫಿಕ್ಸ್ ಆಗಿದೆ. ಕ್ಷಮದಾನ ತಿರಸ್ಕರಿಸಿದ ರಾಷ್ಟ್ರಪತಿಗಳ ನಿರ್ಧಾರ ಪ್ರಶ್ನಿಸಿ ಅಪರಾಧಿ ಮುಖೇಶ್ ಸಿಂಗ್ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದನು. ಅರ್ಜಿಯನ್ನ ವಜಾಗೊಳಿಸಿರುವ ಸುಪ್ರೀಂಕೋರ್ಟ್, ರಾಷ್ಟ್ರಪತಿಗಳು ಆತುರದ ನಿರ್ಧಾರ ತೆಗೆದುಕೊಂಡಿಲ್ಲ. ದೋಷಿ ಮುಖೇಶ್ ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ. ಸುಪ್ರೀಂಕೋರ್ಟ್ ಕ್ಷಮದಾನ ನೀಡಲು ಯಾವುದೇ ಪೂರಕ ಆಧಾರಗಳಿಲ್ಲ. ಜೈಲಿನಲ್ಲೇ ಶಿಕ್ಷೆ ಅನುಭವಿಸಿದ್ದಕ್ಕೆ ಕ್ಷಮದಾನ ಮಾಡಲಾಗಲ್ಲ. ಯಾವುದೇ ಕಾರಣಕ್ಕೂ ಗಲ್ಲುಶಿಕ್ಷೆ ತಡೆ ಮಾಡುವಂತಿಲ್ಲ ಎಂದು ತಿಳಿಸಿದೆ.
ಪ್ರಕರಣ ಸಂಬಂಧ ಮುಖೇಶ್ ಸಿಂಗ್ ಪವನ್ ಗುಪ್ತಾ, ವಿನಯ್ ಮತ್ತು ಅಕ್ಷಯ್ ನಾಲ್ವರು ಅಪರಾಧಿಗಳಿಗೆ ಫೆಬ್ರವರಿ 1ರಂದು ಗಲ್ಲು ಶಿಕ್ಷೆ ನಿಗದಿಯಾಗಿದೆ.
Key words: Nirbhaya -gang rape -murder case-Mukesh –petition-dismissed-supreme court