ಮೈಸೂರು,ಫೆ,4,2020(www.justkannada.in): ಕೇರಳದಲ್ಲಿ ಕೊರೋನಾ ವೈರಸ್ ಪತ್ತೆಯಾದ ಹಿನ್ನೆಲೆ ಮೈಸೂರಿನಲ್ಲಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ.
ಕೊರೋನಾ ವೈರಸ್ ಭೀತಿ ಹಿನ್ನೆಲೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸ್ಪೇಷಲ್ ವಾರ್ಡ್ ನಿರ್ಮಾಣ ಮಾಡಲಾಗಿದ್ದು, 8-10 ಬೆಡ್ ವ್ಯವಸ್ಥೆಯುಳ್ಳ ವಿಶೇಷ ವಾರ್ಡ್ ಕೊರೋನಾ ಚಿಕಿತ್ಸೆಗೆ ಮಿಸಲಿಡಲಾಗಿದೆ. ಇನ್ನು ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿ ಮಾಹಿತಿ ನೀಡಿರುವ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ವೆಂಕಟೇಶ್, ಮೈಸೂರಿನಲ್ಲಿ ಈವರೆಗೆ ಒಂದೆ ಒಂದು ಕೊರೋನಾ ಪ್ರಕರಣ ಪತ್ತೆಯಾಗಿಲ್ಲ. ಆದರೂ ಮುನ್ನಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮೈಸೂರಿನ ಪ್ರವಾಸಿತಾಣಗಳಲ್ಲಿ ಕೊರೋನಾ ಬಗ್ಗೆ ಜಾಗೃತಿ ಕೈಗೊಳ್ಳಲಾಗುತ್ತಿದೆ, ಪ್ರಮುಖವಾಗಿ ಏರ್ಪೋರ್ಟ್‌ನಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ, ಅರಮನೆ, ಚಾಮುಂಡಿಬೆಟ್ಟ, ಮೃಗಾಲಯಗಳಲ್ಲು ಜಾಗೃತಿ ಮೂಡಿಸಲು ನಿರ್ಧಾರ ಮಾಡಲಾಗಿದೆ. ಕೊರೋನಾ ಬಗ್ಗೆ ಪ್ರವಾಸಿತಾಣದಲ್ಲಿ ಹೆಚ್ಚು ತಪಾಸಣೆ ಮಾಡಲು ಸಾಧ್ಯವಾಗೋಲ್ಲ. ಎಲ್ಲ ಜನರು ಆತಂಕಕ್ಕೆ ಒಳಗಾಗುತ್ತಾರೆ. ಅದಕ್ಕಾಗಿ ಸೊಂಕು ಕಂಡುಬಂದಲ್ಲಿ ಮಾತ್ರ ನಾವು ತಪಾಸಣೆ ಮಾಡುತ್ತೇವೆ. ಇಲ್ಲವಾದಲ್ಲಿ ಅರಿವು ಮೂಡಿಸಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸುತ್ತೇವೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ವೆಂಕಟೇಶ್ ತಿಳಿಸಿದರು.
Key words: Corona virus- detection- Kerala-Mysore-kr hospitel- Special ward