ನವದೆಹಲಿ:ಮೇ-24(www.justkannada.in) ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲು ಮುಂದಾಗಿದೆ. ಈ ನಡುವೆ ಸೋಲಿನ ಹೊಣೆಹೊತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರೂ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋಲು ಕಂಡಿದ್ದಾರೆ. ಅಲ್ಲದೆ ದೇಶಾದ್ಯಂತ ಕಾಂಗ್ರೆಸ್ ಹೀನಾಯ ಪ್ರದರ್ಶನ ನೀಡಿದ್ದರಿಂದ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ತಾಯಿ ಸೋನಿಯಾ ಗಾಂಧಿ ಮುಂದೆ ತಿಳಿಸಿದ್ದಾರೆ ಎಂದು ಹೇಳಾಗುತ್ತಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಒಟ್ಟಾರೆ 349 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೆ. ಇನ್ನು ಬಿಜೆಪಿಯೇ ಒಟ್ಟಾರೆ 303 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಕೇವಲ 52 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಹಿನ್ನಲೆಯಲ್ಲಿ ರಾಹುಲ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಆದರೆ ಕಾಂಗ್ರೆಸ್ ಸೋಲಿನ ಕುರಿತು ಹಾಗೂ ರಾಹುಲ್ ರಾಜೀನಾಮೆ ವಿಚಾರದ ಬಗ್ಗೆ ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ) ಸಭೆಯಲ್ಲಿ ಚರ್ಚೆ ನಡೆಯಲಿದೆ.
ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ನ ಘಟಾನುಘಟಿ ನಾಯಕರುಗಳಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಜ್ಯೋತಿರಾಧಿತ್ಯ ಸಿಂಧಿಯಾ, ಮಧ್ಯ ಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಸೋತು ಮಕಾಡೆ ಮಲಗಿದ್ದಾರೆ ಈ ನಿಟ್ಟಿನಲ್ಲಿ ಸೋಲಿನ ಪರಾಮರ್ಶೆ ನಡೆಯುವ ಅಗತ್ಯವಿದ್ದು, ಸಿಡಬ್ಲ್ಯುಸಿ ಸಭೆಯಲ್ಲಿ ಮಹತ್ವದ ಚರ್ಚೆಗಳು ನಡೆಯಲಿದೆ ಎನ್ನಲಾಗಿದೆ.