ಬೆಂಗಳೂರು, ಮಾರ್ಚ್ 7, 2020 (www.juskannada.in): ಜೆಡಿಎಸ್ ಮುಖಂಡ, ಮಾಜಿ ಎಂಎಲ್ ಸಿ ರಮೇಶ್ ಬಾಬು ಜೆಡಿಎಸ್ ಗೆ ಗುಡ್ ಬಾಯ್ ಹೇಳಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜೀನಾಮೆ ಪತ್ರದ ಪ್ರತಿಯನ್ನು ಬಿಡುಗಡೆ ಮಾಡಿದ್ದಾರೆ. ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಪದಾಧಿಕಾರಿ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಜನತಾ ಪಕ್ಷ ಮತ್ತು ಜನತಾ ಪರಿವಾರದೊಂದಿಗೆ ನನಗೆ ನಾಲ್ಕು ದಶಕಗಳ ರಾಜಕೀಯ ಸಂಬಂಧ ಕಡಿದುಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.
ನನ್ನ ಪಕ್ಷ ನಿಷ್ಟೆಯನ್ನು ಇಲ್ಲಿಯವರೆಗೆ ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಆದರೂ ಒಂದು ಪೂರ್ಣ ಅವಧಿಗೆ ವಿಧಾನಪರಿಷತ್ ಸದಸ್ಯನಾಗಿ ಕೆಲಸ ಮಾಡಲು ಅವಕಾಶ ದೊರೆಯಲಿಲ್ಲ. ಕಾರಣ ಏನೇ ಇರಲಿ ಈ ಪಕ್ಷದಲ್ಲಿ ಇಲ್ಲಿಯವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಿದ ಎಲ್ಲರಿಗೂ ನನ್ನ ಅನಂತ ಧನ್ಯವಾದಗಳು. ರಾಜಕೀಯ ಪಯಣದಲ್ಲಿ ಮುಂದೆಯೂ ನಿಮ್ಮ ಸಲಹೆ ಸಹಕಾರ ಬೆಂಬಲ ಇರಲಿ ಎಂದು ರಮೇಶ್ ಬಾಬು ಹೇಳಿದ್ದಾರೆ.